Recent Posts

Monday, January 20, 2025
ರಾಜಕೀಯಸುದ್ದಿ

ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಉನ್ನತ ಸ್ಥಾನಕ್ಕೆ ಕರ್ನಾಟಕದ ಆರ್‍ಎಸ್‍ಎಸ್ ಕಟ್ಟಾಳು ಬಿ.ಎಲ್. ಸಂತೋಷ್? – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದ ಆರ್‍ಎಸ್‍ಎಸ್ ಕಟ್ಟಾಳು ಬಿ.ಎಲ್. ಸಂತೋಷ್ ಉನ್ನತ ಸ್ಥಾನಕ್ಕೆ ಏರಲಿದ್ದಾರೆ ಎಂಬ ಮಾತುಗಳು ರಾಜ್ಯ ಬಿಜೆಪಿ ಮೂಲಗಳಿಂದ ಕೇಳಿ ಬರುತ್ತಿವೆ. ಅದರ ಜೊತೆಯಲ್ಲೇ ಸಂತೋಷ್ ಆಪ್ತರಿಗೂ ರಾಜ್ಯ ಬಿಜೆಪಿಯಲ್ಲಿ ಹೆಚ್ಚಿನ ಜವಾಬ್ದಾರಿ ನೀಡಲಿದೆ ಎಂದೂ ಹೇಳಲಾಗುತ್ತಿದೆ.

ಸದ್ಯ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ರಾಮ್‍ಲಾಲ್ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಸ್ಥಾನದ ಮೇಲೆ ಬಿ.ಎಲ್. ಸಂತೋಷ್ ಕಣ್ಣಿಟ್ಟಿದ್ದು, ಮತ್ತೆ ಕೇಂದ್ರದಲ್ಲಿ ಅಧಿಕಾರ ಗದ್ದುಗೆಗೇರಿದರೆ ರಾಮ್‍ಲಾಲ್ ಸ್ಥಾನವನ್ನು ಸಂತೋಷ್ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಲವರ್ಧನೆಯ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಕೂಡ ಸಂತೋಷ್ ಅವರಿಗೆ ಉನ್ನತ ಸ್ಥಾನ ನೀಡಲು ಚಿಂತಿಸಿದೆ ಎಂದೂ ರಾಜ್ಯ ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ. ಅದರ ಜತೆಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಅವಧಿ ಮುಗಿದು ಆರು ತಿಂಗಳುಗಳೇ ಕಳೆದಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಪ್ರಬಲ ನಾಯಕರು ಈ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿ.ಎಲ್. ಸಂತೋಷ್ ಸಹ ತಮ್ಮ ಆಪ್ತರಾದ ಸಿ.ಟಿ. ರವಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆ ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ ಅಥವಾ ಗೋವಿಂದ ಕಾರಜೋಳ ಅವರನ್ನು ನೇಮಿಸುವಂತೆ ಪಟ್ಟು ಹಿಡಿದಿದ್ದಾರೆ. ಅತ್ತ ಆರ್. ಅಶೋಕ್ ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಆದರೆ ಹೈಕಮಾಂಡ್ ಮಟ್ಟದಲ್ಲಿ ಇತ್ತೀಚೆಗೆ ಬಿ.ಎಲ್. ಸಂತೋಷ್ ಪ್ರಭಾವಿಯಾಗಿ ಬೆಳೆದಿರುವುದು ಗುಟ್ಟಾಗಿ ಉಳಿದಿಲ್ಲ. ಒಂದು ವೇಳೆ, ಯಡಿಯೂರಪ್ಪ ಅವರ ಮಾತಿಗೆ ಬೆಲೆ ನೀಡದೇ, ಸಿ.ಟಿ. ರವಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಿಸಿದರೆ ಬಿಎಸ್‍ವೈ ಮುಂದಿನ ನಡೆ ಏನಾಗಲಿದೆ ಎಂಬುದೂ ಎಂಬುದೀಗ ಪ್ರಶ್ನೆಯಾಗಿ ಉಳಿದಿದೆ.