Recent Posts

Monday, January 20, 2025
ಸುದ್ದಿ

KAHALE BREAKING – ನೆಲ್ಯಾಡಿಯ ಕೊಕ್ಕಡದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಐವರಿಗೆ ಗಾಯ – ಕಹಳೆ ನ್ಯೂಸ್

ಉಪ್ಪಿನಂಗಡಿ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಕ್ಕಡದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಐದು ಮಂದಿ ಗಾಯಗೊಂಡು ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಫಘಾತದ ರಭಸಕ್ಕೆ ಎರಡೂ ವಾಹನದ ಮುಂಭಾಗ ತೀವ್ರವಾಗಿ ಜಖಂಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಿಂದ ಮಂಗಳೂರಿಗೆ ಕಡೆ ಆಗಮಿಸುತ್ತಿದ ಮಾರುತಿ ಸ್ವಿಫ್ಟ್ ಡಿಸೈರ್ (KA 42 A 6277) ಹಾಗೂ ಪುತ್ತೂರು ರಿಜಿಸ್ಟ್ರೇಶನ್ ಹೊಂದಿರುವ ಮಾರುತಿ ಸಿಲ್ಯಾರಿಯೋ (KA 21 P 6987) ನಡುವೆ ಅಫಘಾತ ಸಂಭವಿಸಿದ್ದು, ವೇಗದಲ್ಲಿ ಬರುತಿದ್ದ ಅಂಬುಲೆನ್ಸ್ ಗೆ ಸೈಡ್ ಕೊಡಲು ಯತ್ನಿಸಿದಾಗ ಈ ದುರಂತ ನಡೆದಿದೆ ಎಂದು ಅಫಘಾತದ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಪುತ್ತೂರಿಗೆ ಸಾಗಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಹೆಚ್ಚಿನ ವಿವರಗಳನ್ನು ಕಲೆಹಾಕುತ್ತಿದ್ದಾರೆ. ಸ್ಥಳೀಯರ ನೆರವಿನಿಂದ ಪೊಲೀಸರು ರಸ್ತೆ ಸಂಚಾರ ಸುಗಮಗೊಳಿಸಿದ್ದು ಸಂಚಾರ ಮತ್ತೆ ಆರಂಭಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು