Monday, January 20, 2025
ಸುದ್ದಿ

ಬೈಕೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಸಾವು – ಕಹಳೆ ನ್ಯೂಸ್

ತುಮಕೂರು: ಬೈಕೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ರಾಷ್ಟ್ರೀಯ ಹೆದ್ದಾರಿ 4 ರ ನೆಲಹಾಳ್‌ನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಮೃತರು ಮೂವರೂ ಯುವಕರಾಗಿದ್ದು ಚಿತ್ರದುರ್ಗದ ಚಳ್ಳಕೆರೆ ಮೂಲದವರು ಎಂದು ಪ್ರಾಥಮಿಕ ವರದಿ ಹೇಳಿದೆ. ಬೆಂಗಳೂರಿನಿಂದ ಚಿತ್ರದುರ್ಗದತ್ತ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅತೀ ವೇಗವಾಗಿ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿಯಾಗಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋರಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.