Recent Posts

Monday, January 20, 2025
ಸುದ್ದಿ

ಕುಮಟಾದಲ್ಲಿ ಪ್ರತಿಭಟನಾಕಾರರಿಂದ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಬೆಂಕಿ:144 ಸೆಕ್ಷನ್ ಜಾರಿ

 

ಕುಮಟಾ:ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವು ಖಂಡಿಸಿ ಬಿಜೆಪಿ ಕರೆ ನೀಡಿದ ಕಾರವಾರ ಬಂದ್ ಸೋಮವಾರ ಯಶಸ್ವಿಯಾಗಿದ್ದು ,ಈ ವೇಳೆ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ ಘಟನೆ ನಡೆದಿದೆ.ಕುಮಟಾದಲ್ಲಿ ಇದೀಗ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು,ಈ ಸಂದರ್ಭದಲ್ಲಿ ಕುಮಟಾ ಪ್ರತಿಭಟನೆಯ ನಿಯಂತ್ರಣ ವ್ಯವಸ್ಥೆ ಪರಿಶೀಲನೆಯಲ್ಲದ್ದ ಐಜಿಪಿ ನಿಂಬಾಳ್ಕರ್ ಅವರ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.ಪರಿಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ.

ಜಾಹೀರಾತು
ಜಾಹೀರಾತು
ಜಾಹೀರಾತು


ಪ್ರತಿಭಟನಾಕಾರರು ಪೋಲೀಸ್ ಪೆಡೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಸಾವಿನ ಪ್ರಕರಣದ ಹಿನ್ನಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಉತ್ತರಕನ್ನಡ ಜಿಲ್ಲೆಯ ಕುಮಟಾದಲ್ಲಿ ೧೪೪ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response