Tuesday, January 21, 2025
ಸುದ್ದಿ

ಅಯೋಧ್ಯೆ ಭೂ ವಿವಾದ; ಪ್ರಕ್ರಿಯೆ ಮುಂದೂಡಿಕೆಯೇ ಸುಪ್ರೀಂ ಕೆಲಸ..?! – ಕಹಳೆ ನ್ಯೂಸ್

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯ ದಶಕಗಳ ಹಳೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಕೇಸಿನಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಆಗಸ್ಟ್ 15ರವರೆಗೆ ವಿಸ್ತರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶ ಎಫ್ಎಂಐ ಕಲಿಫುಲ್ಲಾ ನೇತೃತ್ವದ ಮೂವರು ಸದಸ್ಯರನ್ನೊಳಗೊಂಡ ತಂಡವನ್ನು ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಸಾಧ್ಯವಾಗುತ್ತದೆಯೇ ಎಂದು ನೋಡಲು ರಚಿಸಲಾಗಿತ್ತು. ತಂಡ ನಿನ್ನೆ ಸುಪ್ರೀಂ ಕೋರ್ಟ್ ಗೆ ಮುಚ್ಚಿದ ಲಕೋಟೆಯಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು