Monday, January 20, 2025
ರಾಜಕೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿಗಿಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಾವಿರ ಪಟ್ಟು ಉತ್ತಮ ಪ್ರಧಾನಿ: ಅರವಿಂದ್ ಕೇಜ್ರಿವಾಲ್ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗಿಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಾವಿರ ಪಟ್ಟು ಉತ್ತಮ ಪ್ರಧಾನಿ ಎಂದು ಎಎಪಿ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಕ್ಷೇತ್ರಗಳಲ್ಲಿಯೂ ವಿಫಲರಾಗಿದ್ದಾರೆ ಆದ್ದರಿಂದ ನಕಲಿ ರಾಷ್ಟ್ರೀಯತೆಯೊಂದಿಗೆ ಮತ್ತೆ ಅಧಿಕಾರಕ್ಕೆ ಬರಲು ಯತ್ನಿಸುತ್ತಿದ್ದಾರೆ. ಮೋದಿಯದು ನಕಲಿ ರಾಷ್ಟ್ರೀಯತೆ, ಅದು ದೇಶಕ್ಕೆ ಅಪಾಯಕಾರಿಯಾದದ್ದು ಎಂದು ಹೇಳಿದ್ದಾರೆ.

ಯಾವುದೇ ಕೆಲಸ ಮಾಡದ ಮೋದಿ ಸಶಸ್ತ್ರ ಪಡೆಗಳನ್ನು ವೋಟಿಗಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಕೇಜ್ರಿವಾಲ್, ಮೋದಿಗಿಂತಲೂ ಮನ್ ಮೋಹನ್ ಸಿಂಗ್ ಸಾವಿರ ಬಾರಿ ಪ್ರಧಾನಿಯಾದರೂ ಉತ್ತಮ ಎಂದರು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ, ಮೋದಿ ಹಾಗೂ ಅಮಿತ್ ಶಾ ಮತ್ತೆ ಅಧಿಕಾರಕ್ಕೆ ಬಾರದಂತೆ ತಡೆಗಟ್ಟುವುದೇ ನಮ್ಮ ಗುರಿಯಾಗಿದೆ. ಈ ಬಾರಿಯ ಚುನಾವಣೆಯಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂದು ಕೇಜ್ರಿವಾಲ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು