Monday, January 20, 2025
ಸುದ್ದಿ

ಹಿರಿಯ ಯಕ್ಷಗಾನ ಭಾಗವತ ನೆಬ್ಬೂರು ನಾರಾಯಣ ಹೆಗಡೆ ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾದರು – ಕಹಳೆ ನ್ಯೂಸ್

ಶಿರಸಿ : ಹಿರಿಯ ಯಕ್ಷಗಾನ ಭಾಗವತ ನೆಬ್ಬೂರು ನಾರಾಯಣ ಹೆಗಡೆ (81) ಹೃದಯಾಘಾತದಿಂದ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಸಿದ್ದಾಪುರ ತಾಲೂಕಿನ ನೆಬ್ಬೂರಿನ ಕಲಾವಿದ ನಾರಾಯಣ ಹೆಗಡೆ, ಕಳೆದ ನಾಲ್ಕು ದಶಕಗಳಿಂದ ಯಕ್ಷಗಾನದಲ್ಲಿ ಮನೆಮಾತಾಗಿದ್ದರು. ಕೆರೆಮನೆ ಮೇಳದಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಹೆಗಡೆಯವರು ರಾಮನಿರ್ಯಾಣದಂತ ಭಾವನಾತ್ಮಕ ಯಕ್ಷ ಪ್ರಸಂಗವನ್ನು ಖ್ಯಾತಿಗೆ ತಂದಿದ್ದರು.

1956-57 ರ ಸಮಯದಲ್ಲಿ ಯಕ್ಷಗಾನದ ಆಸಕ್ತಿಯನ್ನು ಬೆಳಸಿಕೊಂಡ ಅವರು ಕೆರೆಮನೆ ಮೇಳವನ್ನು ಸೇರಿದ್ದರು. ಅಲ್ಲಿಂದ ಪ್ರಾರಂಭವಾದ ಅವರ ಯಕ್ಷಗಾನ ಪಯಣ 2010 ರ ವರೆಗೂ ಅದೇ ಮೇಳದಲ್ಲಿ ಪ್ರಧಾನ ಭಾಗವತರಾಗಿ ಮುಂದುವರೆದಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿಷ್ಠಿತ ಪ್ರಶಸ್ತಿಗಳಾದ ಕರ್ನಾಟಕ ರಾಜ್ಯ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಜಾನಪದ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ, ಶ್ರೇಣಿ ಪ್ರಶಸ್ತಿ, ಪ್ರೊ.ಬಿ.ವಿ. ಆಚಾರ್ಯ ಪ್ರಶಸ್ತಿಗಳನ್ನು ಇವರು ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು