Monday, January 20, 2025
ಸಿನಿಮಾಸುದ್ದಿ

ಶಿವಾಜಿ ಸುರತ್ಕಲ್ ನಲ್ಲಿ ರಮೇಶ್ ಅರವಿಂದ್ ತನಿಖೆ!! – ಕಹಳೆ ನ್ಯೂಸ್

ನಟ ರಮೇಶ್ ಅರವಿಂದ್ ಶಿವಾಜಿ ಸುರತ್ಕಲ್ ಎಂಬ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‘ಶಿವಾಜಿ ಸುರತ್ಕಲ್- ದಿ ಕೇಸ್ ಆಫ್ ರಣಗಿರಿ ರಹಸ್ಯ’ ತನಿಖಾಧಿಕಾರಿಯ ಜೊತೆಗೆ ನಾಯಕನ ಪಾತ್ರದಲ್ಲೂ ರಮೇಶ್ ಕಾಣಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಟ ರಮೇಶ್ ಗಾಗಿ ಮೊದಲ ಬಾರಿಗೆ ವಿಶೇಷವಾಗಿ ಗಡ್ಡದ ಡಿಸೈನ್ ಮಾಡಲಾಗಿದೆ,.ಇದೇ ಮೊದಲ ಬಾರಿಗೆ ರಮೇಶ್ ಈ ರೀತಿಯ ಗಡ್ಡದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ನಾಲ್ಕು ತಿಂಗಳಿಂದ ರಮೇಶ್ ಶೇವ್ ಮಾಡಿಲ್ಲ ಎಂದು ನಿರ್ದೇಶಕ ಆಕಾಶ್ ಶ್ರೀವಾತ್ಸವ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಚಿತ್ರದಲ್ಲಿ ರಮೇಶ್ ಅರವಿಂದ್ ಷರ‍್ಲಾಕ್ ಹೋಮ್ಸ್ ಥರ ರ‍್ವ ಪತ್ತೇದಾರ. ಹೆಸರು ಶಿವಾಜಿ ಸುರತ್ಕಲ್. ಇದೇ ಮೊದಲು ಅವರು ವಿಭಿನ್ನ ಪಾತ್ರ ಮತ್ತು ವಿಶಿಷ್ಟ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಿರ್ದೇಶಕರ ಪ್ರಕಾರ, ಶಿವಾಜಿ ಸುರತ್ಕಲ್ ಬೇರೆಯವರಂತಲ್ಲ. ಅವನ ತನಿಖಾ ವಿಧಾನವೇ ಅಪೂರ್ವ. ಸಾಕ್ಷ್ಯಾಧಾರಗಳನ್ನು ಶೋಧಿಸಿ, ತನ್ನ ಅದ್ಭುತವಾದ ಕಲ್ಪನಾ ಶಕ್ತಿಯಿಂದ ಅಪರಾಧಿಯನ್ನು ಹಿಡಿದು ಹಾಕುವ ಚಾಣಾಕ್ಷ.

ಈಗಾಗಲೇ ಶೇ,80 ರಷ್ಟು ಶೂಟಿಂಗ್ ಮುಗಿದಿದ್ದು, ಉಳಿದ ಭಾಗವನ್ನು ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಶೂಟಿಂಗ್ ಮಾಡಲಾಗುವುದು, ಶೂಟಿಂಗ್ ಮುಗಿದ ಕೂಡಲೇ ಎಡಿಟಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ರಾಧಿಕಾ ಚೇತನ್ ಹಾಗೂ ಆರೋಹಿ ನಾರಾಯಣ್. ರೇಖಾ ಕೆ.ಎನ್. ಹಾಗೂ ಅನೂಪ್ ಗೌಡ ನಟಿಸಿದ್ದಾರೆ.