Monday, January 20, 2025
ರಾಜಕೀಯಸುದ್ದಿ

‘ಮೋದಿಯನ್ನ ವಜಾ ಮಾಡೋಕೆ ಮುಂದಾಗಿದ್ದರಾ ವಾಜಪೇಯಿ..? – ಕಹಳೆ ನ್ಯೂಸ್

ಭೋಪಾಲ್: ಗುಜರಾತ್ ಹತ್ಯಾಕಾಂಡದ ಬಳಿಕ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪಕ್ಷದಿಂದಲೇ ವಜಾಗೊಳಿಸಲು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಿದ್ಧತೆ ನಡೆಸಿದ್ದರು. ಆದರೆ, ಆಗ ಗೃಹ ಸಚಿವರಾಗಿದ್ದ ಎಲ್.ಕೆ. ಆಡ್ವಾಣಿ ಅವರು ಸಂಪುಟಕ್ಕೆ ರಾಜೀನಾಮೆ ನೀಡೋದಾಗಿ ಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಅಟಲ್‍ಜಿ ತಮ್ಮ ನಿರ್ಧಾರವನ್ನು ಕೈಬಿಟ್ಟಿದ್ರು ಅಂತಾ ಬಿಜೆಪಿಯ ಮಾಜಿ ನಾಯಕ ಯಶವಂತ್ ಸಿನ್ಹಾ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2002ರಲ್ಲಿ ಗೋವಾದಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಅಟಲ್‍ಜಿ, ಮೋದಿಜೀ ರಾಜೀನಾಮೆ ನೀಡದಿದ್ದರೆ, ಅವರ ಸರ್ಕಾರವನ್ನೇ ವಜಾಗೊಳಿಸುವ ನಿರ್ಧಾರ ಕೈಗೊಳ್ಳಬೇಕಾಗಬಹುದು ಎಂದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದ್ರೆ, ನನ್ನ ಪ್ರಕಾರ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮೋದಿಯನ್ನು ವಜಾಗೊಳಿಸುವ ಬಗ್ಗೆ ಅಡ್ವಾಣಿಜೀ ವಿರೋಧ ವ್ಯಕ್ತಪಡಿಸಿದ್ದರು. ಮೋದಿ ಅವರನ್ನು ವಜಾಗೊಳಿಸಿದರೆ, ನಾನು ರಾಜೀನಾಮೆ ನೀಡುತ್ತೇನೆಂದು ಆಡ್ವಾಣಿ ಅಟಲ್‍ಜಿ ಅವರಿಗೆ ಹೇಳಿದ್ದರು. ಹೀಗಾಗಿ ವಾಜಪೇಯಿ ಅವರು ತಮ್ಮ ನಿರ್ಧಾರವನ್ನು ಕೈ ಬಿಟ್ಟಿದ್ದರು. ಆ ಕಾರಣಕ್ಕೆ ಮೋದಿ ಮುಖ್ಯಮಂತ್ರಿಯಾಗಿ ಮುಂದುವರೆದಿದ್ದರು ಎಂದು ಸಿನ್ಹಾ ಹೇಳಿದ್ದಾರೆ.