Monday, January 20, 2025
ರಾಜಕೀಯಸುದ್ದಿ

ಉಪ ಚುನಾವಣೆ ಪ್ರಚಾರಕ್ಕೆ ಕೊನೆಗೂ ಸಿಎಂ ಕುಮಾರಸ್ವಾಮಿ ಸಜ್ಜು – ಕಹಳೆ ನ್ಯೂಸ್

ಬೆಂಗಳೂರು: ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೊನೆಗೂ ಪ್ರಚಾರಕ್ಕೆ ತೆರಳಲು ಸಜ್ಜಾಗಿದ್ದಾರೆ.

ಸೋಮವಾರ ಕುಂದಗೋಳ ಮತ್ತು ಮಂಗಳವಾರ ಚಿಂಚೋಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಎರಡು ದಿನಗಳ ಹಿಂದೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಪ್ರಚಾರಕ್ಕೆ ಆಗಮಿಸಿ ಎಂದು ಕಾಂಗ್ರೆಸ್ ಸಚಿವರುಗಳು ಕುಮಾರಸ್ವಾಮಿಯವರನ್ನ ಆಹ್ವಾನಿಸಿದ್ದರು. ಸಿದ್ದರಾಮಯ್ಯ, ಕಾಂಗ್ರೆಸ್‍ನ ಸಚಿವರ ಮಾತು ಹಾಗೂ ಮಾಧ್ಯಮಗಳಲ್ಲಿ ಬಂದ ವರದಿ ನೋಡಿ ಎಚ್ಚೆತ್ತುಕೊಂಡ ಕುಮಾರಸ್ವಾಮಿ ಕುಂದಗೋಳ ಕ್ಷೇತ್ರದಲ್ಲಿ ದೋಸ್ತಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಮತ್ತು ಚಿಂಚೋಳಿ ಕ್ಷೇತ್ರದಲ್ಲಿ ದೋಸ್ತಿ ಅಭ್ಯರ್ಥಿ ಸುಭಾಷ್ ರಾಠೋಡ್ ಪರ ಮಂಗಳವಾರ ಪ್ರಚಾರ ನಡೆಸಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಉಪ ಚುನಾವಣೆಯ ಪ್ರಚಾರದ ಆಖಾಡಕ್ಕೆ ಕುಮಾರಸ್ವಾಮಿ ನೇರವಾಗಿ ಎಂಟ್ರಿ ಕೊಡುವುದರ ಮೂಲಕ ಮೈತ್ರಿ ನಿಯಮ ಪರಿಪಾಲನೆಯಾಗಲಿದೆ. ಕುಮಾರಸ್ವಾಮಿಗೆ ಜೆಡಿಎಸ್‍ನ ಕೆಲ ಸಚಿವರು ಹಾಗೂ ಶಾಸಕರು ಕೂಡ ಸಾಥ್ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು