Tuesday, January 21, 2025
ಸುದ್ದಿ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದ ರಂಭಾಪುರಿ ಮಠದ ಸ್ವಾಮೀಜಿ – ಕಹಳೆ ನ್ಯೂಸ್

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಮಠದ ಶ್ರೀ ವೀರಸೋಮೇಶ್ವರ ಜಗದ್ಗುರು ಹೇಳಿದ್ದಾರೆ.

ಹುಬ್ಬಳ್ಳಿಯ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಹೋದ ಕಡೆಯಲ್ಲೆಲ್ಲ ಜನ ಮೋದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿರುವುದನ್ನು ಕೇಳಿದ್ದೇನೆ. ತಮ್ಮ ಆಶಯ ಕೂಡ ಅದೇ ಆಗಿದೆ. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಧರ್ಮವನ್ನು ಒಡೆಯಲು ಹೋದವರು ಪ್ರತಿಫಲ ಅನುಭವಿಸುತ್ತಾರೆ. ರಾಜಕೀಯದಲ್ಲಿ ಧರ್ಮ ಪೀಠಗಳನ್ನು ಎಳೆದು ತರಬಾರದು. ಧರ್ಮ ಒಡೆಯಲು ಹೋದ ಕೆಲವರು ತಪ್ಪೊಪ್ಪಿಕೊಂಡಿದ್ದಾರೆ. ಮತ್ತೆ ಕೆಲವರು ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ. ಕುಂದಗೋಳ ಮತ್ತು ಚಿಂಚೋಳಿ ಉಪಚುನಾವಣೆಯಲ್ಲಿ ಎಲ್ಲಾ ವರ್ಗದವರ ಸಮಸ್ಯೆಗೆ ಸ್ಪಂದಿಸುವ ಅಭ್ಯರ್ಥಿಯನ್ನು ಜನ ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು