ನವದೆಹಲಿ: 6ನೇ ಹಂತದ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಶುಕ್ರವಾರ ತೆರೆಬಿದ್ದಿದೆ. ಇಂದು ಏಳು ರಾಜ್ಯಗಳ 59 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ.
ಉತ್ತರ ಪ್ರದೇಶದ 14, ಹರಿಯಾಣದ 10, ಪಶ್ಚಿಮ ಬಂಗಾಳ, ಬಿಹಾರ, ಮಧ್ಯ ಪ್ರದೇಶದ ತಲಾ 8, ದೆಹಲಿಯ 7 ಮತ್ತು ಜಾಖರ್ಂಡಿನ 4 ಕ್ಷೇತ್ರಗಳಲ್ಲಿ 6ನೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ.
ಕ್ರಿಕೆಟಿಗ ಗೌತಮ್ ಗಂಭಿರ್, ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ಬಾಕ್ಸರ್ ವಿಜೇಂದರ್ ಸಿಂಗ್ ಸೇರಿದಂತೆ ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಉತ್ತರ ಪ್ರದೇಶದಲ್ಲಿ ಕೇಂದ್ರ ಸಚಿವೆ ಮನೇಕಾ ಗಾಂಧಿ, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಸ್ಪರ್ಧೆಯಲ್ಲಿರುವ ಪ್ರಮುಖರಾಗಿದ್ದಾರೆ.