Monday, January 20, 2025
ರಾಜಕೀಯಸುದ್ದಿ

ವೀರಶೈವ ಲಿಂಗಾಯುತ ಮತಗಳನ್ನು ಸೆಳೆಯಲು ಕಾಂಗ್ರೆಸ್ ಕಸರತ್ತು – ಕಹಳೆ ನ್ಯೂಸ್

ಕಲಬುರ್ಗಿ : ಚಿಂಚೋಳಿ ಕ್ಷೇತ್ರದ ಉಪಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದು, ವೀರಶೈವ ಲಿಂಗಾಯುತ ಮತಗಳನ್ನು ಸೆಳೆಯಲು ಕಾಂಗ್ರೆಸ್ ಕಸರತ್ತು ನಡೆಸಿದೆ. ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚಿಂಚೋಳಿಯ ಸುತ್ತ ಮುತ್ತಲಿನ ವಿವಿಧ ಮಠಾಧೀಶರನ್ನ ಭೇಟಿ ಮಾಡಿದ್ದರು.

ಇದರ ಬೆನ್ನಲ್ಲೇ ಈಗ ಕೈ ನಾಯಕರು ಕೂಡ ಹಲವು ಮಠಾಧೀಶರನ್ನ ಭೇಟಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್‍ರನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಗೃಹ ಸಚಿವ ಎಂ.ಬಿ.ಪಾಟೀಲ್ ನಿನ್ನೆ ಶ್ರೀನಿವಾಸ ಸರಡಗಿಯ ಶ್ರೀಗುರು ಚಿಕ್ಕವೀರೇಶ್ವರ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಶ್ರೀ ರೇವಣಸಿದ್ದ ಶಿವಾಚಾರ್ಯ, ಶ್ರೀ ಅಭಿನವ ಮುರುಘೇಂದ್ರ ಮಹಾಸ್ವಾಮಿಗಳನ್ನ ಭೇಟಿಯಾಗಿದ್ದರು. ಇತ್ತ ಸುಲೇಪೇಟ್‍ನಲ್ಲಿ ಕೈ ಅಭ್ಯರ್ಥಿ ಸುಭಾಷ್ ರಾಠೋಡ್ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿವಿಧ ಶ್ರೀಗಳನ್ನ ಭೇಟಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು