ಚಿಂಚೋಳಿ ಕ್ಷೇತ್ರದ ಉಪ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ತಮ್ಮ ಭಾಷಣದಲ್ಲಿ, ಸಮ್ಮಿಶ್ರ ಸರ್ಕಾರದ ರಚನೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಬಹುದಿತ್ತು. ಆದರೆ ಹೈಕಮಾಂಡ್ ಅದಾಗಲೇ ನಿರ್ಧಾರ ಕೈಗೊಂಡಿದ್ದರಿಂದ ಅದಕ್ಕೆ ಬೆಲೆಕೊಟ್ಟು ಸುಮ್ಮನಾಗಿದ್ದರು ಎಂದು ಹೇಳಿದ್ದರು. ಈ ಮಾತು ಸಿದ್ದರಾಮಯ್ಯನವರನ್ನು ಉದ್ದೇಶಿಸಿ ಕುಮಾರಸ್ವಾಮಿ ಹೇಳಿದ್ದು ಎಂದು ಅನೇಕ ಕಡೆ ಕೇಳಿ ಬರುತ್ತಿದ್ದು, ಈ ಮಾತಿಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ.
ಸಿದ್ದರಾಮಯ್ಯನವರು ಇಂದು ಟ್ವೀಟ್ ಮಾಡಿದ್ದು, ಇದರಲ್ಲಿ “ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ. ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು.” ಎಂದು ಹೇಳಿದ್ದಾರೆ.