Wednesday, January 22, 2025
ಸುದ್ದಿ

ಆಗುಂಬೆ ಘಾಟ್ ವಾಹನ ಸಂಚಾರಕ್ಕೆ ಜಿಲ್ಲಾಡಳಿತದಿಂದ ಗ್ರೀನ್ ಸಿಗ್ನಲ್ – ಕಹಳೆ ನ್ಯೂಸ್

ಶಿವಮೊಗ್ಗ: ಒಂದೂವರೆ ತಿಂಗಳಿನಿಂದ ವಾಹನ ಸಂಚಾರ ನಿಷೇಧಗೊಳಿಸಲಾಗಿದ್ದ ಆಗುಂಬೆ ಘಾಟ್ ಈಗ ಸಂಚಾರಕ್ಕೆ ಮುಕ್ತವಾಗಿದೆ. ಇಂದಿನಿಂದ ಮಿನಿ ಬಸ್, ಕಾರು, ಜೀಪು ಸೇರಿದಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದೆ. ಇಷ್ಟು ದಿನ ಶಾಶ್ವತ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗಿತ್ತು. ಜೂನ್ 1ರಿಂದ ಭಾರೀ ವಾಹನಗಳ ಸಂಚಾರಕ್ಕೂ ಅನುವು ಮಾಡಿಕೊಡಲಾಗಿದೆ. ಸದ್ಯ ರಸ್ತೆ ಕ್ಯೂರಿಂಗ್ ಕಾರ್ಯ ನಡೆಯುತ್ತಿರೋ ಹಿನ್ನೆಲೆಯಲ್ಲಿ ಲಘು ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು