Wednesday, January 22, 2025
ರಾಜಕೀಯಸುದ್ದಿ

ಟ್ವೀಟ್ ಮೂಲಕವೇ ಉತ್ತರಿಸಿದ ಹೆಚ್‍ಡಿಕೆ – ಕಹಳೆ ನ್ಯೂಸ್

ಮಾಜಿ ಸಿ.ಎಂ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಮಧ್ಯೆ ಮತ್ತೆ ಟ್ವೀಟ್ ಗುದ್ದಾಟ ಶುರುವಾಗಿದೆ. ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಎಂಬ ಹೆಚ್‍ಡಿಕೆ ಹೇಳಿಕೆ ಹಿನ್ನೆಲೆ, ಸಚಿವ ಹೆಚ್.ಡಿ ರೇವಣ್ಣ ಕೂಡ ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು ಅಂತಾ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಟ್ವೀಟ್‍ಗೆ ಪ್ರತಿಕ್ರಿಯೆ ಎಂಬಂತೆ ಈಗ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿರೋ ಮುಖ್ಯಮಂತ್ರಿ ಕುಮಾರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು ಅನ್ನೋದು ವಾಸ್ತವತೆ ಆಧರಿಸಿದ ನನ್ನ ಮನದಾಳದ ಮಾತಾಗಿತ್ತು.ಈ ಹೇಳಿಕೆಯ ಮೂಲಕ ರಾಜಕೀಯ ಲಾಭ ಪಡೆಯುವ ಕೀಳು ಅಭಿರುಚಿ ನನ್ನದಲ್ಲ. ಈ ಹೇಳಿಕೆಗೆ ರಾಜಕೀಯದ ಬಣ್ಣಕಟ್ಟಿ ಅಪಾರ್ಥ ಕಲ್ಪಿಸುವಂತೆ ವಿಶ್ಲೇಷಿಸುವುದು ಆರೋಗ್ಯಕರವಲ್ಲ ಅಂತಾ ಟ್ವೀಟ್ ಮಾಡಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು