ಪಡುಬಿದ್ರೆ: ನಾಲ್ಕು ವಾಹನಗಳ ಮಧ್ಯೆ ಸರಣಿ ಅಪಘಾತ ನಡೆದಿರುವ ಘಟನೆಯು ಮುಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಹೆದ್ದಾರಿಯಲ್ಲಿ ಉಡುಪಿಗೆ ಹೋಗುತ್ತಿದ್ದ ರಿಕ್ಷಾಗೆ ವಿರುದ್ಧ ದಿಕ್ಕಿನಿಂದ ಬಂದ ಓಮ್ನಿ ಡಿಕ್ಕಿ ಹೊಡೆದಿದೆ. ರಿಕ್ಷಾದ ಹಿಂಬದಿಯಲ್ಲಿ ಇದ್ದ ಮತ್ತೊಂದು ರಿಕ್ಷಾ ಮತ್ತು ಕಾರು ಕೂಡ ಡಿಕ್ಕಿ ಆಗಿದೆ. ಅಪಘಾತದಲ್ಲಿ ನಾಲ್ಕು ವಾಹನಗಳಿಗೆ ಹಾನಿಯಾಗಿದೆ. ರಿಕ್ಷಾ ಚಾಲಕನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.