Tuesday, January 21, 2025
ಸುದ್ದಿ

“ನಾಥೂರಾಮ್ ಗೋಡ್ಸೆ ಓರ್ವ ದೇಶಭಕ್ತ ಎಂದ ಪ್ರಜ್ಞಾ ಸಿಂಗ್ – ಕಹಳೆ ನ್ಯೂಸ್

ಚುನಾವಣಾ ಪ್ರಚಾರದ ವೇಳೆ ‘ಗಾಂಧೀಜಿಯನ್ನು ಹತ್ಯೆಗೈದಿದ್ದ ನಾಥುರಾಮ್ ಗೋಡ್ಸೆ ಮೊದಲ ಹಿಂದು ಉಗ್ರ’ ಎಂದು ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೆ, ಇದೀಗ ಮಹಾತ್ಮಾ ಗಾಂಧೀಜಿಯವರನ್ನು ಗುಂಡಿಕ್ಕಿ ಕೊಂದ ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದು ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ, ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಮಲ್ ಹಾಸನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಜ್ಞಾ ಸಿಂಗ್, “ನಾಥೂರಾಮ್ ಗೋಡ್ಸೆ ಓರ್ವ ದೇಶಭಕ್ತ. ಎಂದಿಗೂ ಅವರು ದೇಶಭಕ್ತರಾಗಿಯೇ ಉಳಿಯುತ್ತಾರೆ. ಗೋಡ್ಸೆಯನ್ನು ಭಯೋತ್ಪಾದಕ ಎಂದು ಕರೆಯುವವರಿಗೆ ಈ ಚುನಾವಣೆಯಲ್ಲಿ ಸೂಕ್ತ ಉತ್ತರ ಸಿಗಲಿದೆ” ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು