Tuesday, January 21, 2025
ಸುದ್ದಿ

ಪೊಲೀಸರಿಂದ ಫೈರಿಂಗ್ ಓರ್ವ ಸಾವು – ಕಹಳೆ ನ್ಯೂಸ್

ಮೈಸೂರು : ಹಣ ದುಪ್ಪಟ್ಟು ಮಾಡುವ ದಂಧೆಯಲ್ಲಿ ತೊಡಗಿದ್ದ ವ್ಯಕ್ತಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಹೆಬ್ಬಾಳದ ರಿಂಗ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿ ಮುಂಬೈ ನಿವಾಸಿ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ವ್ಯಕ್ತಿ ಸೇರಿದಂತೆ ಇನ್ನಿಬ್ಬರು ವಿಜಯನಗರದ ರಿಂಗ್ ರಸ್ತೆ ಬಳಿಯ ಹೆಬ್ಬಾಳದ ಅಪಾರ್ಟ್ ಮೆಂಟ್ ಒಂದರಲ್ಲಿ ಹಣ ದುಪ್ಪಟ್ಟು ಮಾಡುವ ದಂಧೆಯಲ್ಲಿ ತೊಡಗಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಇನ್ಸ್ ಪೆಕ್ಟರ್ ಕುಮಾರ್ ಸಿಬ್ಬಂದಿಗಳ ಸಮೇತ ದಾಳಿ ನಡೆಸಿದರು. ಈ ವೇಳೆ ಇಬ್ಬರು ಪರಾರಿಯಾಗಿದ್ದು, ಮೃತ ಮುಂಬೈ ಮೂಲದ ವ್ಯಕ್ತಿ ಇನ್ಸ್ ಪೆಕ್ಟರ್ ಕುಮಾರ್ ಅವರ ಮೇಲೆ ಶೂಟ್ ಮಾಡಲು ಗನ್ ತೆಗೆಯುತ್ತಿದ್ದಂತೆ ಪೊಲೀಸರು ಫೈರಿಂಗ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಗುಂಡು ಆತನ ಎದೆಗೆ ಹೊಕ್ಕಿದ್ದರಿಂದ ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ಕೆ.ಆರ್.ಆಸ್ಪತ್ರೆಗೆ ಸಾಗಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಹಲವು ದಿನಗಳಿಂದ ಮೃತ ವ್ಯಕ್ತಿ ಸೇರಿದಂತೆ ಹಲವರು ಮೈಸೂರಿನಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ಕೆಲ ಶ್ರೀಮಂತರ ಬಳಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಕೆಲವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಐಜಿಪಿ ಉಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತಿದ್ದಾರೆ.