ಕೈ ಶಾಸಕರೊಬ್ಬರ ಹೊಸ ಬಾಂಬ್: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪಕ್ಷವನ್ನೇ ವಿಭಜಿಸುತ್ತಿದ್ದಾರೆ – ಕಹಳೆ ನ್ಯೂಸ್
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ಪಡೆದುಕೊಂಡಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಅದರಲ್ಲೂ ಉತ್ತರಪ್ರದೇಶದ ಪೂರ್ವ ಭಾಗದ ಉಸ್ತುವಾರಿಯನ್ನು ಪ್ರಿಯಾಂಕಾ ಗಾಂಧಿ ವಹಿಸಿಕೊಂಡಿದ್ದು, ಆದರೆ ಅವರ ಕೆಲವು ನಡೆಗಳಿಗೆ ಕಾಂಗ್ರೆಸ್ ಮುಖಂಡರಿಂದಲೇ ಅಸಮಾಧಾನ ವ್ಯಕ್ತವಾಗುತ್ತಿದೆ.
ಪ್ರಚಾರ ಕಾರ್ಯದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೊಬ್ಬರು ಪದಾಧಿಕಾರಿಗಳೊಂದಿಗೆ ರಾಜೀನಾಮೆ ನೀಡಿದ ಬಳಿಕ ಈಗ ಕೈ ಶಾಸಕರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪಕ್ಷವನ್ನೇ ವಿಭಜಿಸುತ್ತಿದ್ದಾರೆ. ಅಲ್ಲದೆ ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆಂದು ಹರ್ಚಂದ್ ಪುರ ಕಾಂಗ್ರೆಸ್ ಶಾಸಕ ರಾಕೇಶ್ ಸಿಂಗ್ ಆರೋಪಿಸಿದ್ದಾರೆ.
ಅಲ್ಲದೆ ಕೆಲವರು ಬೇರೆ ಕಡೆಯಿಂದ ಗೂಂಡಾಗಳನ್ನು ಕರೆತಂದು ನನ್ನ ಸಹೋದರನ ಮೇಲೆ ಹಲ್ಲೆ ನಡೆಸಿದ್ದು, ಇದು ಪ್ರಿಯಾಂಕಾ ಗಾಂಧಿ ಅವರದ್ದೇ ಷಡ್ಯಂತ್ರ ಎಂದು ಹೇಳಿದ್ದಾರೆ. ಶಾಸಕ ರಾಕೇಶ್ ಸಿಂಗ್ ಸಹೋದರ ದಿನೇಶ್ ಪ್ರತಾಪ್ ಸಿಂಗ್ ರಾಯ್ ಬರೇಲಿಯಲ್ಲಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿದ್ದು, ಈ ಹಿನ್ನೆಲೆಯಲ್ಲಿ ಆರೋಪ-ಪ್ರತ್ಯಾರೋಪಗಳು ನಡೆದಿವೆ.