Tuesday, January 21, 2025
ರಾಜಕೀಯಸುದ್ದಿ

ಕಮಲ್ ಹಾಸನ್ ಮೇಲೆ ಚಪ್ಪಲಿ ಎಸೆದಿದ್ದ ಬೆನ್ನಲ್ಲೆ ಮೊಟ್ಟೆ ಮತ್ತು ಕಲ್ಲಿಂದ ದಾಳಿ – ಕಹಳೆ ನ್ಯೂಸ್

ಕೊಯಮತ್ತೂರು–  ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ಮೇಲೆ ಚಪ್ಪಲಿ ಎಸೆದಿದ್ದ ಬೆನ್ನಲ್ಲೆ ದಾಳಿ ಮುಂದಿವರಿದ್ದು ಮೊಟ್ಟೆ ಮತ್ತು ಕಲ್ಲು ಗಳನ್ನು ತೂರಲಾಗಿದೆ.

ಈ ಮಧ್ಯೆ ಮಕ್ಕಳ್ ನೀಧಿ ಮಯ್ಯಂ (ಎಂಎನ್‍ಎಂ) ಸಂಸ್ಪಾಪಕ ಕಮಲ್ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಧುರೈನಲ್ಲಿ ನಿನ್ನೆ ರಾತ್ರಿ ಕಿಡಿಗೇಡಿಗಳು ನಟ ಕಮಲ್ ಹಾಸನ್ ರತ್ತ ಚಪ್ಪಲಿ ತೂರಿದ್ದರು. ತಮಿಳುನಾಡಿನ ತಿರುಪ್ಪರಂಕುಂಡ್ರಮ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ಕಮಲ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಕಮಲ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ತಮಿಳುನಾಡಿ ಸೂಳೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಅರವಕುರಿಚ್ಚಿಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಪಾಲ್ಗೊಂಡಿದ್ದರು.

ಈ ವೇಳೆ ಕಿಡಿಗೇಡಿಗಳು ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ. ಅಲ್ಲದೆ ಕಮಲ್ ಹಾಸನ್ ಕುಳಿತಿದ್ದ ವೇದಿಕೆಯತ್ತ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ನಟ ಕಮಲ್ ಹಾಸನ್ ಸೇರಿದಂತೆ ಯಾರಿಗೂ ಯಾವುದೇ ರೀತಿಯ ಹಾನಿಯಾಗಿಲ್ಲ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಿ ಕಮಲ್ ಹಾಸನ್‍ರನ್ನು ಸುರಕ್ಷಿತಕ್ಕೆ ಕರೆದೊಯ್ಯಿದರು.

ಇನ್ನು ಸ್ಥಳದಲ್ಲಿದ್ದ ಎಂಎನ್‍ಎಂ ಕಾರ್ಯಕರ್ತರು ಕಲ್ಲು ಮೊಟ್ಟೆ ತೂರಿದ ಇಬ್ಬರು ಶಂಕಿತರನ್ನು ಹಿಡಿದು ಹಲ್ಲೆಗೆ ಮುಂದಾದಾಗ ಪೊಲೀಸರು ಮಧ್ಯೆಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ವಿಚಾರಣೆ ನಂತರ ಆರೋಪಿಗಳನ್ನು ಬಿಡುಗಡೆ ಮಾಡಿದರು. ಪೊಲೀಸರ ಕ್ರಮವನ್ನು ವಿರೋಧಿಸಿ ಎಂಎನ್‍ಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಈ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 2ಕ್ಕೆ ಮೆಟ್ರೋಪಾಲಿಟಿಯನ್ ಮ್ಯಾಜಿಸ್ಟ್ರೇಟ್ ಸುಮೀತ್ ಆನಂದ್ ಮುಂದೂಡಿದ್ದಾರೆ. ಆಗ ದೂರುದಾರ ವಿಷ್ಣುಗುಪ್ತ ಅವರ ಹೇಳಿಕೆಯನ್ನು ಪಡೆಯಲಾಗುತ್ತದೆ.