Monday, January 20, 2025
ಸುದ್ದಿ

ಕ್ರೈಸ್ತ ದೇವರ ಮೂರ್ತಿಯ ಗಾಜನ್ನು ಪುಡಿಮಾಡಿದ ದುಷ್ಕರ್ಮಿಗಳು – ಕಹಳೆ ನ್ಯೂಸ್

ಬಂಟ್ವಾಳ: ಮನೇಲ ಕ್ರಿಸ್ತರಾಜ ದೇವಾಲಯಕ್ಕೆ ಸೇರಿದ ಕ್ರೈಸ್ತ ದೇವರ ಮೂರ್ತಿಯ ಗಾಜನ್ನು ದುಷ್ಕರ್ಮಿಗಳು ಹಾನಿಗೊಳಿಸಿದ ಘಟನೆ ವಿಟ್ಲ ಸಮೀಪದ ಪುಣಚ – ತೋರಣಕಟ್ಟೆ ಎಂಬಲ್ಲಿ ಶನಿವಾರ ನಡೆದಿದೆ. ಇಲ್ಲಿನ ತೋರಣಕಟ್ಟೆ ರಸ್ತೆಯಲ್ಲಿರುವ ದುಷ್ಕರ್ಮಿಗಳು ಕಲ್ಲೆಸೆದು ಹಾನಿ ಮಾಡಿದ್ದು, ಗ್ರೋಟ್ಟೊವಿನ ಹೊರಗಿನ ಗಾಜು ಪುಡಿಯಾಗಿದೆ.

ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಟ್ಲ ಠಾಣಾಧಿಕಾರಿ ಯಲ್ಲಪ್ಪ ಅವರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧರ್ಮಗುರು ಆಗ್ರಹಿಸಿದ್ದಾರೆ. ಈ ಸಂಬಂಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು