Monday, January 20, 2025
ಸುದ್ದಿ

ಬೆಂಗಳೂರಿನತ್ತ ರಮೇಶ್ ಜಾರಕಿಹೊಳಿ, ಕುತೂಹಲ ಮೂಡಿಸಿದ ದೆಹಲಿ ಪ್ರವಾಸ – ಕಹಳೆ ನ್ಯೂಸ್

ಬೆಳಗಾವಿ: ಕಾಂಗ್ರೆಸ್ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಬೆಳಗಾವಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ರಮೇಶ್ ಜಾರಕಿಹೊಳಿ ತೆರಳಿದ್ದಾರೆ. ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಮೇಶ್, ನೋ ಕಮೆಂಟ್ ಎಂದು ಮುಂದೆ ಸಾಗಿದ್ರು. ಇಂದು ಸಂಜೆ ಅಥವಾ ನಾಳೆ ರಮೇಶ್ ಜಾರಕಿಹೊಳಿ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಅವರ ದೆಹಲಿ ಪ್ರವಾಸದ ಬಗ್ಗೆ ಕುತೂಹಲ ಮೂಡಿದೆ.

ಲೋಕಸಭಾ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮುಗಿದಿದ್ದು ಎಲ್ಲರ ಚಿತ್ತ ಮೇ 23ರ ಫಲಿತಾಂಶದ ಮೇಲಿದೆ. ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯೋ ಸಾಧ್ಯತೆ ಇದೆ. ಅದಲ್ಲೂ ಕಾಂಗ್ರೆಸ್ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿಯನ್ನು ಬಿಜೆಪಿಗೆ ಸೆಳೆಯಲು ಪ್ಲಾನ್ ಮಾಡಲಾಗ್ತಿದೆ ಎನ್ನಲಾಗಿದೆ. ಈ ಹಿನ್ನೆಲೆ ಈಗ ರಮೇಶ್ ಜಾರಕಿಹೊಳಿ ಅವರ ನಡೆ ಕುತೂಹಲ ಮೂಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು