Monday, January 20, 2025
ರಾಜಕೀಯಸುದ್ದಿ

ಸಮೀಕ್ಷೆ ಬಳಿಕ ಕಾಂಗ್ರೆಸ್ ಸರ್ಕಾರಕ್ಕೆ ಎದುರಾಯ್ತು ‘ಸಂಕಷ್ಟ’: ಬಿಜೆಪಿ ಪಾಳಯದಲ್ಲಿ ಭಾರಿ ಉತ್ಸಾಹ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯ ಬಳಿಕ ಪ್ರಕಟವಾಗಿರುವ ಮತದಾನೋತ್ತರ ಸಮೀಕ್ಷೆಗಳು ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳಿರುವ ಮಧ್ಯೆ ಬಿಜೆಪಿ ಪಾಳಯದಲ್ಲಿ ಭಾರಿ ಉತ್ಸಾಹ ಮೂಡಿದೆ.

ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕರ್ನಾಟಕ ಹಾಗು ಮಧ್ಯ ಪ್ರದೇಶದಲ್ಲಿ ಹಾಲಿ ಸರ್ಕಾರಗಳು ಪತನಗೊಂಡು ಈ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂಬ ಮಾತುಗಳು ಮಧ್ಯೆ ಮಧ್ಯಪ್ರದೇಶದಲ್ಲಿ ಈಗಾಗಲೇ ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಹುಜನ ಸಮಾಜ ಪಕ್ಷದ ಬೆಂಬಲದೊಂದಿಗೆ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಕಮಲ್ ನಾಥ್ ನೇತೃತ್ವದ ಸರ್ಕಾರಕ್ಕೆ ಬಹುಮತವಿಲ್ಲವೆಂದು ರಾಜ್ಯಪಾಲರಿಗೆ ದೂರು ನೀಡಲು ಬಿಜೆಪಿ ನಿರ್ಧರಿಸಿದೆ. ಆಡಳಿತ ಪಕ್ಷದ ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ ಎನ್ನಲಾಗಿದ್ದು, ಹೀಗಾಗಿ ಸರ್ಕಾರ ರಚನೆಗೆ ಈಗಿನಿಂದಲೇ ಪೂರಕ ಸಿದ್ಧತೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು