Recent Posts

Monday, January 20, 2025
ಸುದ್ದಿ

ಬಿಸಿ ರೋಡಿನ ವಿವೇಕನಗರದಲ್ಲಿ ಅಪರಿಚಿತ ಶವ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ: ಬಿಸಿ ರೋಡಿನ ವಿವೇಕನಗರದಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಎದುರುಗಡೆ ಸರ್ವಿಸ್ ರಸ್ತೆಯಲ್ಲಿ ಹಾದುಹೋಗುವ ವಿವೇಕನಗರದಲ್ಲಿ ಇರುವ ಖಾಲಿ ಜಾಗದಲ್ಲಿ ಸುಮಾರು 35 ವರ್ಷ ಪ್ರಾಯದ ಗಂಡು ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಮಲಗಿದ ಸ್ಥಿತಿಯಲ್ಲಿ ಈತನ ಮೃತದೇಹ ಇದ್ದು, ಇದನ್ನು ನೋಡಿದ ಸ್ಥಳೀಯರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್. ಐ. ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಶವವನ್ನು ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರದ ಶವಗಾರಕ್ಕೆ ಕಳುಹಿಸಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು