ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು – ಕಹಳೆ ನ್ಯೂಸ್
ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿಯೇತರ ಸರ್ಕಾರ ರಚನೆಗೆ ಟೊಂಕಕಟ್ಟಿ ನಿಂತಿರುವ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ನಿನ್ನೆ ರಾತ್ರಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇನ್ನು ಈ ವೇಳೆ ಸಿಎಂ ಕುಮಾರಸ್ವಾಮಿ ಕೂಡ ಹಾಜರಿದ್ದರು. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸರ್ಕಾರ ಹೇಗೆ ರಚಿಸಬೇಕು ಅನ್ನೋ ವಿಚಾರದ ಕುರಿತು ದೇವೇಗೌಡರ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸಿ ಕೇಂದ್ರದಲ್ಲಿ ಸರ್ಕಾರ ರಚನೆಗೆ ಮುಂದಾಗಿರುವ ನಾಯ್ಡು, ಬಿಎಸ್ಪಿ ವರಿಷ್ಠೆ ಮಾಯಾವತಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಮುಖಂಡರ ಜೊತೆಗೂ ಮಾತುಕತೆ ನಡೆಸಿದ್ದಾರೆ.