Monday, January 20, 2025
ಸುದ್ದಿ

ಶೃಂಗೇರಿ ಶಾರದಾಂಬೆ ಸನ್ನಿಧಾನಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಹಾಗೂ ತಾಯಿ ಅನಿತಾ ಕುಮಾರಸ್ವಾಮಿ- ಕಹಳೆ ನ್ಯೂಸ್

ಚಿಕ್ಕಮಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶ ನಾಳೆ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಅವರ ತಾಯಿ ಅನಿತಾ ಕುಮಾರಸ್ವಾಮಿ ಶೃಂಗೇರಿ ಶಾರದಾಂಬೆ ಸನ್ನಿಧಾನಕ್ಕೆ ಆಗಮಿಸಿದ್ದಾರೆ. ಈ ಮೊದಲು ಶೃಂಗೇರಿ ಮೆಣಸೆ ಹೆಲಿಪ್ಯಾಡ್‌ಗೆ ಬಂದಿಳಿದ ಅವರು, ನಂತರ ಶಾರದಾಂಬಾ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಶೃಂಗೇರಿಯಿಂದ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ಇನ್ನು ಮಂಡ್ಯಕ್ಷೇತ್ರದಿಂದ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿ ಬೆಂಬಲಿತ ಸುಮಲತಾ ಅಂಬರೀಷ್ ಸ್ಪರ್ಧಿಸಿದ್ದಾರೆ. ಈಗಾಗಲೇ ಕೆಲವು ಎಕ್ಸಿಟ್​​ಪೋಲ್​ಗಳು ಸುಮಲತಾ ಅಂಬರೀಷ್ ಗೆಲ್ಲುತ್ತಾರೆ ಎಂದು ಹೇಳಿವೆ. ಈ ಹಿನ್ನೆಲೆಯಲ್ಲಿ ತಮ್ಮ ಗೆಲುವಿಗಾಗಿ ಶಾರದಾಂಬೆಯ ಕೃಪೆ ಪಡೆಯಲು ನಿಖಿಲ್ ಕುಮಾರಸ್ವಾಮಿ ಶೃಂಗೇರಿಗೆ ಆಗಮಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು