Tuesday, January 21, 2025
ರಾಜಕೀಯಸುದ್ದಿ

ಶೇಕಡಾ ನೂರಕ್ಕೆ ನೂರರಷ್ಟು ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳುತ್ತಾರೆ: ಡಿ.ವಿ.ಸದಾನಂದಗೌಡ – ಕಹಳೆ ನ್ಯೂಸ್

ಬೆಂಗಳೂರು: ರೋಷನ್ ಬೇಗ್ ಹೇಳಿದ್ದರಲ್ಲಿ ತಪ್ಪೇನಿದೆ. ಸಿದ್ದರಾಮಯ್ಯ ಒಬ್ಬ ದುರಂಹಕಾರಿ. ರೋಷನ್ ಬೇಗ್ ಹೇಳಿದ್ದು ನಿಜ. ಸತ್ಯವನ್ನು ಬಹಳ ದಿನ ಮುಚ್ಚಿಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ನಗರದ ತಮ್ಮ ಕಚೇರಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ನಾಳೆ ಸಂಜೆಯವರೆಗೆ ಮಾತ್ರ ಮುಖ್ಯಮಂತ್ರಿಯಾಗಿರುತ್ತಾರೆ. ಗರಿಷ್ಠ ಎಂದರೆ ನಾಡಿದ್ದು ಬೆಳಗ್ಗೆವರಗೆ ಮಾತ್ರ ಅವರು ಸಿಎಂ ಆಗಿರುತ್ತಾರೆ. ಮೇ.24ರಂದು ಅವರು ಅಧಿಕಾರದಿಂದ ಕೆಳಗಿಳಿಯುತ್ತಾರೆ. ಹೊಸ ಸರ್ಕಾರ ರಚನೆಗೆ ನಾವು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ. ಶೇಕಡಾ ನೂರಕ್ಕೆ ನೂರರಷ್ಟು ಕುಮಾರಸ್ವಾಮಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಬಾಂಬ್ ಕೂಡ ಸಿಡಿಸಿದ್ರು.

ಇದೇ ವೇಳೆಯಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ ನನ್ನ ಪಕ್ಷದ ಒಬ್ಬ ಶಾಸಕರು ಮಾತ್ರ ಇದ್ದರು, ಉಳಿದ ಏಳೂ ನನ್ನ ವಿರೋಧಿ ಶಾಸಕರಿದ್ದರು. ನನಗೆ ಪೂರ್ಣ ಗೆಲುವಿನ ವಿಶ್ವಾಸವಿದೆ. ಚುನಾವಣೆಯ ಕೊನೆಯ ಎರಡು ದಿನ ಕಾಂಗ್ರೆಸ್ ಮತ್ತು ಜೆಡಿಎಸ್ ನ‌ ಶಾಸಕರು ತಮ್ಮ ಎಲ್ಲಾ ಚಟುವಟಿಕೆಗಳನ್ನು ನಡೆಸಿದ್ದಾರೆ. ಕಳೆದ ಬಾರಿಗಿಂತ ಗೆಲುವಿನ‌ ಅಂತರದಲ್ಲಿ ಸ್ಚಲ್ಪ ವ್ಯತ್ಯಾಸ ಆಗಬಹುದು ಎಂದು  ಬಿಜೆಪಿ ಅಭ್ಯರ್ಥಿ ಡಿ.ವಿ. ಸದಾನಂದ ಗೌಡ  ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು