ಲೋಕಸಭಾ ಚುನಾವಣೆಯ ಫಲಿತಾಂಶ : ಅಭ್ಯರ್ಥಿಗಳು ಮಾತ್ರವಲ್ಲದೇ ಇಡೀ ದೇಶದ ಜನತೆಗೆ ಫಲಿತಾಂಶದ ಕುತೂಹಲ – ಕಹಳೆ ನ್ಯೂಸ್
ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಅಭ್ಯರ್ಥಿಗಳು ಮಾತ್ರವಲ್ಲದೇ ಇಡೀ ದೇಶದ ಜನತೆಗೆ ಇಂದಿನ ಫಲಿತಾಂಶ ಏನಾಗುತ್ತೋ ಏನೋ ಅನ್ನೋ ಕುತೂಹಲ ಇದೆ. ಬೆಳಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಲಿದ್ದು, ಈಗಾಗಲೇ ದೇಶದೆಲ್ಲೆಡೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇಶದ 543 ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ 7 ಹಂತದಲ್ಲಿ ಚುನಾವಣೆ ನಡೆದಿತ್ತು. ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಚುನಾವಣಾ ಆಯೋಗ ರದ್ದುಪಡಿಸಿತ್ತು. ಈ ಬಾರಿ ಶೇಕಡಾ 67.11ರಷ್ಟು ದಾಖಲೆಯ ಮತದಾನವಾಗಿದ್ದು, ಫಲಿತಾಂಶ ಏನಾಗಲಿದೆ ಅನ್ನೋದು ಸಂಜೆ ವೇಳೆಗೆ ಗೊತ್ತಾಗಲಿದೆ.
07.28 AM: ಮಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆತೆರಳಿ ತಾಯಿ ಚಾಮುಂಡೇಶ್ವರಿಯ ಆಶಿರ್ವಾದ ಪಡೆದಿದ್ದಾರೆ.
07.18 AM: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಹ ಬನಶಂಕರಿ ದೇವಸ್ಥಾನಕ್ಕೆ ತೆರಳಿ ತಾಯಿಯ ಆಶೀರ್ವಾದ ಪಡೆದಿದ್ದಾರೆ. ಈಗಾಗ್ಲೆ ಸಿಎಂ ಕುಮಾರಸ್ವಾಮಿ, ತೆರಳಿದ್ದು ಅವರೊಟ್ಟಿಗೆ ಅನಿತಾ ಕುಮಾರಸ್ವಾಮಿ ಹಾಗೂ ದೇವೇಗೌಡರು ಸಹ ತಾಯಿಯ ಆಶಿರ್ವಾದ ಪಡೆದಿದ್ದಾರೆ.
07.07 AM: ಬೆಂಗಳೂರು ದಕ್ಷಿಣ ಕ್ಷೇತ್ರದ ಸ್ಟ್ರಾಂಗ್ ರೂಂಗಳು ಓಪನ್ ಆಗಿವೆ. ಅಬ್ಸರ್ವರ್ ಆಫೀಸರ್ ಆರ್ಓ ನಕುಲ್ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ಗಳ ಬಾಗಿಲನ್ನ ತೆರೆಯಲಾಗಿದೆ.
07.05 AM: ಚಿಕ್ಕಬಳ್ಳಾಪುರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವೀರಪ್ಪ ಮೋಯ್ಲಿ ಮತ ಎಣಿಕಾ ಕೇಂದ್ರಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಕ್ಸಿಟ್ ಪೊಲ್ಗಳ ಬಗ್ಗೆ ನಂಬಿಕೆಯಿಲ್ಲ. ಗೆಲ್ಲುವ ನಂಬಿಕೆ ಇದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ ಎಂದರು.
07.00 AM: ಫಲಿತಾಂಶದ ಹಿನ್ನೆಲೆಯಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬನಶಂಕರಿ ದೇವಸ್ಥಾನಕ್ಕೆ ತೆರಳಿದ ದೇವರ ದರ್ಶನ ಪಡೆದಿದ್ದಾರೆ. ಬೆಳ್ಳಂ ಬೆಳಗ್ಗೆ ತಮ್ಮ ಜೆಪಿ ನಗರ ನಿವಾಸದಿಂದ ಬನಶಂಕರಿ ದೇವಸ್ಥಾನಕ್ಕೆ ತೆರಳಿ ತಾಯಿಯ ಆಶಿರ್ವಾದ ಪಡೆದಿದ್ದಾರೆ.