ಗೆಲುವಿಗಾಗಿ ಬೆಳ್ಳಂಬೆಳಗ್ಗೆ ದೇವರ ಮೊರೆ ಹೋದ ಮುಖ್ಯಮಂತ್ರಿ ಕುಮಾರಸ್ವಾಮಿ, ಪುತ್ರ ನಿಖಿಲ್ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ – ಕಹಳೆ ನ್ಯೂಸ್
ಮಂಡ್ಯ: ಲೋಕಸಭಾ ಚುನಾಚವಣೆ ಪ್ರಕ್ರಿಯೆ ಶುರುವಾಗಿ ಸಮಾರು ಎರಡು ತಿಂಗಳೇ ಕಳೆದಿವೆ. ಇಂದು ಲೋಕಸಮರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಇತ್ತ ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ಪುತ್ರ ನಿಖಿಲ್, ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ.
ಬೆಳ್ಳಂಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿದ್ದು, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಇಂದು ಮುಂಜಾನೆ ಸುಮಾರು 5 ಗಂಟೆಗೆ ನಿಖಿಲ್ ಚಾಮುಂಡಿ ಬೆಟ್ಟಕ್ಕೆ ತೆರಳಿ ಆಶೀರ್ವಾದ ಪಡೆದಿದ್ದಾರೆ. ನಿಖಿಲ್ ಅವರಿಗೆ ಸಚಿವರಾದ ಜಿ.ಟಿ.ದೇವೇಗೌಡ, ಪುಟ್ಟರಾಜು ಮತ್ತು ಶಾಸಕ ಸುರೇಶ್ ಗೌಡ ಸಾಥ್ ನೀಡಿದ್ದಾರೆ.
ಇತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ಬೆಳ್ಳಂಬೆಳಗ್ಗೆ ಟೆಂಪಲ್ ರನ್ ಶುರು ಮಾಡಿದ್ದು, ಮೊದಲಿಗೆ ಬೆಂಗಳೂರಿನಲ್ಲಿರುವ ಬನಶಂಕರಿ ದೇವಸ್ಥಾನಕ್ಕೆ ಭೇಟ ನೀಡಿ ತಾಯಿ ಬನಶಂಕರಿ ದೇವಿಯ ದರ್ಶನ ಪಡೆಯಲಿದ್ದಾರೆ. ಬಳಿಕ ಅಲ್ಲಿಂದ ದೊಡ್ಡ ಗಣೇಶ ಟೆಂಪಲ್ ಹಾಗೂ ಗವಿಗಂಗಾದರೇಶ್ವರ ದೇವಾಲಯಕ್ಕೆ ಭೇಟಿ ಕೊಡಲಿದ್ದಾರೆ.
ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲುವಿಗಾಗಿ ಚಾಮುಂಡೇಶ್ವರಿ ಮೊರೆ ಹೋಗಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ತಮ್ಮ ಬೆಂಬಲಿಗರ ಸೂಚನೆ ಮೇರೆಗೆ ಮಂಡ್ಯಕ್ಕೆ ಆಗಮಿಸಲಿದ್ದಾರೆ. ಒಂದು ವೇಳೆ ಸುಮಲತಾ ಗೆಲುವು ಖಚಿತವಾದರೆ ಯಶ್ ಮತ್ತು ದರ್ಶನ್ ಕೂಡ ಮಂಡ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ.