Monday, November 25, 2024
ರಾಜಕೀಯಸುದ್ದಿ

ಕರ್ನಾಟಕ ರಿಸಲ್ಟ್: ಆರಂಭಿಕ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಲೀಡಿಂಗ್‌ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಣೆಗೆ ವೇದಿಕೆ ಸಿದ್ಧವಾಗುತ್ತಿದ್ದು, 28 ಕ್ಷೇತ್ರಗಳಲ್ಲಿ ಗರಿಷ್ಠ ಸ್ಥಾನ ಬಿಜೆಪಿಗೋ ಅಥವಾ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಕೂಟಕ್ಕೋ ಎಂಬುದು ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ. ರಾಜ್ಯದಲ್ಲಿ ಮಂಡ್ಯ, ತುಮಕೂರು ಹಾಗೂ ಹಾಸನ ಕ್ಷೇತ್ರಗಳು ಎಲ್ಲರ ಕುತೂಹಲದ ಕೇಂದ್ರ ಬಿಂದು. ದಿನವಿಡೀ ಏನೇನು ನಡೆಯಿತು ಎಂಬುದರ ಮುಖ್ಯಾಂಶಗಳು ಇಲ್ಲಿ ಲಭ್ಯವಾಗಲಿದೆ.

ಇಂದಿನ ಫಲಿತಾಂಶವು ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಲಿದೆ.

ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಹಬ್ಬದ ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲಿಗೆ ಅಂಚೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಟ್ಟು 28 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳ ಮಾಹಿತಿ ಲಭ್ಯವಾಗಿದ್ದು, ಬಿಜೆಪಿ 24, ಕಾಂಗ್ರೆಸ್‌ 2, ಜೆಡಿಎಸ್‌ 2 ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿದೆ. ಮತ ಎಣಿಕೆ ಕಾರ್ಯ ಚುರುಕು ಪಡೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿಯ ಭದ್ರ ಕೋಟೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ತೇಜಸ್ವಿ ಸೂರ್ಯ, ಕಾಂಗ್ರೆಸ್‌ನ ಬಿಕೆ ಹರಿಪ್ರಸಾದ್‌ ವಿರುದ್ಧ ಮುನ್ನಡೆ ಪಡೆದುಕೊಂಡಿದ್ದಾರೆ.

ರಾಜ್ಯ ರಾಜಕೀಯದ ಮೇಲೂ ಈ ಲೋಕಸಭಾ ಕ್ಷೇತ್ರದ ಚುನಾವಣೆ ಫಲಿತಾಂಶ ಪರಿಣಾಮ ಬೀರಲಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ.

ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಭಾರಿ ಮುನ್ನಡೆಯೊಂದಿಗೆ ಅಂತರ ಕಾಪಾಡಿಕೊಂಡಿದ್ದಾರೆ.

ಇಡೀ ಇಂಡಿಯಾದ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಿಖಿಲ್‌ ಕುಮಾರಸ್ವಾಮಿ ಮುನ್ನಡೆ ಪಡೆದಿದ್ದಾರೆ. ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಆರಂಭಿಕ ಹಿನ್ನಡೆ ಪಡೆದುಕೊಂಡಿದ್ದರು ಈಗ ಎರಡನೇ ಸುತ್ತಿನಲ್ಲಿ ಮುನ್ನಡೆ ಪಡೆದಿದ್ದಾರೆ. ಧಾರವಾಡದಲ್ಲಿ ಪ್ರಹ್ಲಾದ್ ಜೋಷಿ ಮುನ್ನಡೆ ಪಡೆದುಕೊಂಡಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಭಾರಿ ಮುನ್ನಡೆ ಪಡೆದಿದ್ದಾರೆ ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್‌. ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ.

ಬಹುಮತ ಸಂಖ್ಯೆ: 272

ಮುನ್ನಡೆ + ಜಯಭೇರಿ
  • NDA
  • 169
  • UPA
  • 89
  • MGB
  • 27
  • OTH
  • 66
  • ಒಟ್ಟಾರೆ ಸ್ಥಾನಗಳು
  • 351/543
ವೆಲ್ಲೂರಿನಲ್ಲಿ ಚುನಾವಣೆ ರದ್ದು ಪಡಿಸಿದ ಹಿನ್ನೆಲೆಯಲ್ಲಿ 542 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದೆ.

ಕೋಲಾರದಲ್ಲಿ ಸೋಲಿಲ್ಲದ ಸರದಾರರಾಗಿದ್ದ ಕಾಂಗ್ರೆಸ್‌ ಸಂಸದ ಕೆ.ಎಚ್‌. ಮುನಿಯಪ್ಪ ಆರಂಭಿಕ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿಯ ಮನಿಸ್ವಾಮಿ ಮುನ್ನಡೆ ಪಡೆದುಕೊಂಡಿದ್ದಾರೆ. ಹಾಸನದಲ್ಲಿ ಪ್ರಜ್ಞಲ್‌ ರೇವಣ್ಣ ಬಿಜೆಪಿಯ ಎ ಮಂಜುಗಿಂತ ಮುನ್ನಡೆ ಪಡೆದುಕೊಂಡಿದ್ದಾರೆ.

ಚಿಕ್ಕೋಡಿಯಲ್ಲಿ ಹಾಲಿ ಸಂಸದ ಪ್ರಕಾಶ್‌ ಹುಕ್ಕೇರಿಗೆ ಹಿನ್ನಡೆಯಾಗಿದೆ. ಬಿಜೆಪಿಯ ಅಣ್ಣಾ ಸಾಹೇಬ್‌ ಜೊಲ್ಲೆ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಹೊಂದಿದ್ದಾರೆ.

ದಕ್ಷಿಣ ಕನ್ನಡ, ಹಾಸನ, ರಾಯಚೂರು, ದಾವಣಗೆರೆ, ಚಿಕ್ಕೋಡಿ, ಬಳ್ಳಾರಿ, ಮೈಸೂರು, ಮಂಡ್ಯ, ಬೆಂಗಳೂರು ಉತ್ತರ, ಕೊಪ್ಪಳ ಸೇರಿದಂತೆ ಬಹುತೇಕ ಎಲ್ಲ ಕಡೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ಮಾಡಲಾಗುತ್ತಿದೆ. 8 ಗಂಟೆಗೆ ಆರಂಭವಾದ ಮತ ಎಣಿಕೆ ಕಾರ್ಯದ ಆರಂಭಿಕ ಹಂತಗಳಲ್ಲಿ ಬಿಜೆಪಿ ಮುನ್ನಡೆ ಪಡೆದುಕೊಂಡಿದೆ. ಮಂಡ್ಯದಲ್ಲಿ ನಿಖಿಲ್‌ ಅಂಚೆ ಮತಗಳ ಎಣಿಕೆಯಲ್ಲಿ ಮುನ್ನಡೆ ಪಡೆದಿದ್ದಾರೆ. ಆದರೆ ಚಿತ್ರದುರ್ಗದಲ್ಲಿ ತಾಂತ್ರಿಕ ಕಾರಣಗಳಿಂದ ಮತ ಎಣಿಕೆ ಕಾರ್ಯ ವಿಳಂಬವಾಗಿದೆ.

ಈ ನಡುವೆ ಮಂಡ್ಯದಲ್ಲಿ ಕೆಲವು ಕಿಡಿಗೇಡಿಗಳು ಕೇಬಲ್‌ ಫೈಬರ್‌ ವೈರ್‌ ಕಟ್‌ ಮಾಡಿದ್ದಾರೆ. ರಾಜ್ಯದ ಹಲವಾರು ಅಭ್ಯರ್ಥಿಗಳು ಬೆಳಗ್ಗಿನಿಂದಲೇ ಟೆಂಪಲ್‌ ರನ್‌ ಕೈಗೊಂಡಿದ್ದಾರೆ. ಪ್ರಸಕ್ತ ಚುನಾವಣೆಯಲ್ಲಿ ಗೆಲ್ಲಿಸು ಎಂದು ದೇವರ ಮೊರೆ ಹೋಗಿದ್ದಾರೆ. ಎಚ್‌ಡಿ ಕುಮಾರಸ್ವಾಮಿ, ದೇವೇಗೌಡ ಅವರು ಬನಶಂಕರಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ದೊರೆತರೆ ರಾಜ್ಯದ ದೋಸ್ತಿ ಸರಕಾರ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ. ಅತಂತ್ರ ಫಲಿತಾಂಶ ಬಂದು ಅಧಿಕಾರದಿಂದ ಎನ್‌ಡಿಎ ದೂರವುಳಿಯುವಂತಾದರೆ ದೋಸ್ತಿ ಸರಕಾರದ ಆಯುಷ್ಯ ವೃದ್ಧಿಸಲಿದೆ. ಒಟ್ಟಾರೆ ಈ ಫಲಿತಾಂಶ ರಾಜ್ಯದ ಮೂರು ಪ್ರಮುಖ ಪಕ್ಷಗಳಿಗೂ ಮಹತ್ವದ್ದಾಗಿದೆ.

ಮತ ಎಣಿಕೆಯ ದಿನವಾದ ಗುರುವಾರ ಬೆಳಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರತಾಪ್‌ ಸಿಂಹ ಕೂಡ ಚಾಮುಂಡಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಹಾವೇರಿ ಮತ ಎಣಿಕೆ ಕೇಂದ್ರಕ್ಕೆ ಕಾಲಿಗೆ ಮೊಬೈಲ್ ಕಟ್ಟಿಕೊಂಡು ಬಂದಿದ್ದ ಏಜೆಂಟ್‌ ನನ್ನ ಹೊರಹಾಕಿದ ಪೊಲೀಸರು. ಹಿರೇಕೆರೂರು ಬಿಜೆಪಿ ಪಕ್ಷದ ಏಜೆಂಟ್ ಷಣ್ಮುಖಯ್ಯ ಮಳೀಮಠನನ್ನ ಪೊಲೀಸರು ಹೊರ ಹಾಕಿದ್ದಾರೆ.