Tuesday, November 26, 2024
ರಾಜಕೀಯಸುದ್ದಿ

ನಿಖಿಲ್‌ ಕುಮಾರಸ್ವಾಮಿ ವಿರುದ್ಧ 90 ಸಾವಿರ ಮತಗಳ ಅಂತರದಲ್ಲಿ ಸುಮಲತಾ ಗೆಲುವು – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಣೆಗೆ ವೇದಿಕೆ ಸಿದ್ಧವಾಗುತ್ತಿದ್ದು, 28 ಕ್ಷೇತ್ರಗಳಲ್ಲಿ ಗರಿಷ್ಠ ಸ್ಥಾನ ಬಿಜೆಪಿಗೋ ಅಥವಾ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಕೂಟಕ್ಕೋ ಎಂಬುದು ಸ್ಪಷ್ಟವಾದೆ. ರಾಜ್ಯದಲ್ಲಿ ಮಂಡ್ಯ, ತುಮಕೂರು ಹಾಗೂ ಹಾಸನ ಕ್ಷೇತ್ರಗಳು ಎಲ್ಲರ ಕುತೂಹಲದ ಕೇಂದ್ರ ಬಿಂದು. ದಿನವಿಡೀ ಏನೇನು ನಡೆಯಿತು ಎಂಬುದರ ಮುಖ್ಯಾಂಶಗಳು ಇಲ್ಲಿ ಲಭ್ಯವಿದೆ.

ಇಂದಿನ ಫಲಿತಾಂಶವು ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಲಿದೆ. ಇಡೀ ದೇಶದಲ್ಲಿಯೇ ಭಾರಿ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್‌ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿರುದ್ಧ 90 ಸಾವಿರ ಮತಗಳ ಅಂತರದಲ್ಲಿ ಸುಮಲತಾ ಗೆಲುವು ಸಾಧಿಸಿದ್ದಾರೆ. ಮಂಡ್ಯದಲ್ಲಿ ‘ಸ್ವಾಭಿಮಾನ’ಕ್ಕೆ ಜಯ ದಕ್ಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವದ ಹಬ್ಬದ ಲೋಕಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯದ ಹಂತದತ್ತ ತಲುಪಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಕರ್ನಾಟಕದ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಟ್ರೆಂಡ್‌ ಗೊತ್ತಾಗಿದೆ. ಆದರೆ ಮಂಡ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡುಬಂದಿದೆ. ಸುಮಲತಾ ಮತ್ತು ನಿಖಿಲ್ ಕುಮಾರಸ್ವಾಮಿ ನಡುವೆ ಮುನ್ನಡೆಯು ಹಾವು ಏಣಿಯಾಟವಾಡುತ್ತಿದೆ. ಮಂಡ್ಯದಲ್ಲಿ ಈಗ ಮತ ಎಣಿಕೆ ಇನ್ನಷ್ಟು ಚುರುಕು ಪಡೆದುಕೊಂಡಿದ್ದು, ಸುಮಲತಾ ಅಂಬರೀಷ್‌ ಮುನ್ನಡೆ ಹೆಚ್ಚಿಸಿಕೊಂಡಿದ್ದಾರೆ.