Monday, January 20, 2025
ರಾಜಕೀಯಸುದ್ದಿ

ಪ್ರಧಾನಿ ಮೋದಿಗೆ ಸಿಎಂ ಎಚ್. ಡಿ.ಕೆ ಯಿಂದ ಅಭಿನಂದನೆ – ಕಹಳೆ ನ್ಯೂಸ್

ಬೆಂಗಳೂರು: ಜನಾದೇಶ ಪಡೆದ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮಾಡಿರುವ ಸಿಎಂ, ಲೋಕಸಭಾ ಚುನಾವಣೆ ಫಲಿತಾಂಶ ಅನಿರೀಕ್ಷಿತ. ಈ ಫಲಿತಾಂಶವನ್ನು ಗೌರವಿಸುತ್ತೇನೆ. ಜನಾದೇಶ ಪಡೆದ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ.

ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ. ಚುನಾವಣೆ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು ಅಂತಾ ಟ್ವೀಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು