Tuesday, January 21, 2025
ಸುದ್ದಿ

ಇಂದು ಸಿಇಟಿ ಫಲಿತಾಂಶ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: 2019ರ ಸಿಇಟಿ ಫಲಿತಾಂಶವನ್ನು ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಲಿದೆ. ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುದ್ದಿಗೋಷ್ಠಿ ನಡೆಸಲಿದ್ದು, ಮಧ್ಯಾಹ್ನ 1 ಗಂಟೆ ವೇಳೆಗೆ ಫಲಿತಾಂಶ ಪ್ರಕಟ ಗೊಳ್ಳಲಿದೆ.

ಫಲಿತಾಂಶವು http://kea.kar.nic.inhttp://cet.kar.nic.in ಹಾಗೂ   http://kar.results.nic.in ವೆಬ್‌ಸೈಟ್‌ಗಳಲ್ಲಿ ಪ್ರಕಟಗೊಳ್ಳಲಿದೆ. ಸಿಇಟಿ ಫಲಿತಾಂಶದ ಪಟ್ಟಿಯನ್ನು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಬಿಡುಗಡೆ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಏಪ್ರಿಲ್ 29 ಹಾಗೂ 30 ರಂದು ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್​​ ಸೇರಿದಂತೆ ವೃತ್ತಿಪರ ಕೋರ್ಸ್​ಗಳಿಗೆ ಸಿಇಟಿ ಪರೀಕ್ಷೆ ನಡೆದಿತ್ತು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದು, ಶೇಕಡಾ 92ರಷ್ಟು ಜನ ಪರೀಕ್ಷೆ ಬರೆದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು