ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಭರ್ಜರಿ ವಿಜಯದಿಂದ ತಳಮಳಗೊಂಡಿರುವ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಶನಿವಾರ ತಮ್ಮ ನಿವಾಸದಲ್ಲಿ ಪ್ರಮುಖ ನಾಯಕರ ಸಭೆ ಕರೆದಿದ್ದಾರೆ. ಗೆಲುವು ಸಾಧಿಸಿದ ಅಭ್ಯರ್ಥಿಗಳ ಜತೆಗೆ ಸೋತ ಅಭ್ಯರ್ಥಿಗಳೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದು ಇಲ್ಲಿ ಸೋಲು-ಗೆಲುವಿನ ಪರಾಮರ್ಶೆ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಈ ಬಾರಿ ಬಂಗಾಳದ ಚುನಾವಣಾ ಕಣದಲ್ಲಿ ಬಿಜೆಪಿ ಹಾಗೂ ಟಿಎಂಸಿ ನೇರ ಫೈಟ್ ನಡೆಸಿದ್ದವು. 42 ಲೋಕಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 18 ಸ್ಥಾನಗಳನ್ನು ಗೆದ್ದು ಬೀಗಿದೆ. 2014ರ ಚುನಾವಣೆಯಲ್ಲಿ 34 ಸೀಟುಗಳನ್ನು ಗೆದ್ದಿದ್ದ ಟಿಎಂಸಿ ಈ ಬಾರಿ 22 ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ರಾಜ್ಯದಲ್ಲಿ ಬಿಜೆಪಿಯ ಹವಾ ಹೆಚ್ಚುತ್ತಿರುವುದು ಹಾಗೂ ತಮ್ಮ ಪಕ್ಷದ ವರ್ಚಸ್ಸು ಕ್ಷೀಣಿಸುತ್ತಿರುವುದು ದೀದಿ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲಿ ಅವರು ಪಕ್ಷ ಬಲವರ್ಧನೆಗೆ ಈ ಸಭೆ ಕರೆದಿದ್ದಾರೆ.
You Might Also Like
ಮಂಗಳೂರು ತಾಲೂಕಿನ ಕೊಳವೂರು ಗ್ರಾಮದ ಬೊಳಿಯ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿಯ ಅಧ್ಯಕ್ಷರಾಗಿ ಗಂಗಾಧರ್ ಆಯ್ಕೆ-ಕಹಳೆ ನ್ಯೂಸ್
ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ಗೆ ಒಳಪಟ್ಟ ಕೊಳವೂರು ಗ್ರಾಮದ ಬೊಳಿಯ ಸರಕಾರಿ ಉನ್ನತಿಕೃತ ಹಿರಿಯ ಪ್ರಾಥಮಿಕ ಶಾಲೆ ಬೊಳಿಯ ಇಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ...
ಶಿರ್ವ : ವಿದ್ಯಾವರ್ಧಕ ಸಂಸ್ಥೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪಿಠೋಪಕರಣ ಕೊಡುಗೆ- ಕಹಳೆ ನ್ಯೂಸ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗ ಕಾಪು ತಾಲೂಕು ಮತ್ತು ಶಿರ್ವದ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಸಹಕಾರದೊಂದಿಗೆ 80:20ರ ಅನುಪಾತದಲ್ಲಿ ಸಂಘದ...
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ ; ಘೋಷಣೆ ಕೂಗಿ ಪ್ರತಿಭಟನೆ -ಕಹಳೆ ನ್ಯೂಸ್
ಉಚ್ಚಿಲ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತ ಸಹಿತ ಹಲವು ಸಮಸ್ಯೆಗಳಿಗೆ ಪರಿಹಾರ ಆಗ್ರಹಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.ಈ...
ಕಾಯಕಯೋಗಿ, ತ್ರಿವಿಧ ದಾಸೋಹಿ ಡಾ||ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಾಸೋಹ ದಿನ ಆಚರಣೆ -ಕಹಳೆ ನ್ಯೂಸ್
ರಾಜಾಜಿನಗರ: ರಾಜಾಜಿನಗರ ಪ್ರವೇಶ ದ್ವಾರ ಬಳಿ ಡಾ||ಶಿವಕುಮಾರಸ್ವಾಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ ಡಾ||ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 6ನೇ...