ದೇಶಾದ್ಯಂತ ಗಮನ ಸೆಳೆದಿದ್ದ, ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದು ಮತದಾರ ಸುಮಲತಾ ಅಂಬರೀಷ್ ಅವರನ್ನು ಕೈಹಿಡಿದಿದ್ದಾನೆ. ಎದುರಾಳಿಯಾಗಿ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹೀನಾಯವಾಗಿ ಸೋತಿದ್ದಕ್ಕೆ ಅಭಿಮಾನಿಗಳು ಬೇಸರಗೊಂಡಿದ್ದಾರೆ.
ಜೆಡಿಎಸ್ ಭದ್ರಕೋಟೆ ಎಂದೇ ಹೇಳಲಾಗುತ್ತಿದ್ದ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೇಸರಗೊಂಡ ಅಭಿಮಾನಿಯೊಬ್ಬ ಮತ ಚಲಾಯಿಸಿದ್ದ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಬೆರಳು ಕತ್ತರಿಸಿಕೊಂಡಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ ಹಳ್ಳಿಯೊಂದರಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.