ದೇಶದ ಆಡಳಿತ ನಡೆಸಲು ಎರಡನೆಯ ಬಾರಿಗೆ ಆಯ್ಕೆಯಾದ ಬಳಿಕ ನರೇಂದ್ರ ಮೋದಿ ಅವರು ಮೊದಲ ಸಲ ತಾಯಿ ಹೀರಾಬೆನ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.
ನಾಳೆ ಸಂಜೆ ಗುಜರಾತ್‍ಗೆ ತೆರಳಿ ತಮ್ಮ ತಾಯಿಯನ್ನು ಭೇಟಿ ಮಾಡಲಿದ್ದಾರೆ. ಸೋಮವಾರ ಬೆಳಿಗ್ಗೆ ತಮ್ಮ ಕ್ಷೇತ್ರವಾದ ವಾರಣಾಸಿಗೆ ತೆರಳಲಿದ್ದಾರೆ. ತಮ್ಮನ್ನು ಗೆಲ್ಲಿಸಿದ ಜನರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.ಈ ಬಗ್ಗೆ ಸ್ವತಃ ನರೇಂದ್ರ ಮೋದಿ ಅವರು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಗುಜರಾತ್‍ಗೆ ನಾಳೆ ಸಂಜೆ ಹೊರಡಲಿದ್ದು, ನನ್ನ ತಾಯಿಯ ಆಶೀರ್ವಾದ ಪಡೆದುಕೊಳ್ಳಲಿದ್ದೇನೆ. ನಾಡಿದ್ದು ಬೆಳಿಗ್ಗೆ ಕಾಶಿಗೆ ಹೋಗಲಿದ್ದೇನೆ. ನನ್ನ ಮೇಲಿನ ನಂಬಿಕೆಯನ್ನು ಮತ್ತೆ ಪ್ರದರ್ಶಿಸಿದ ಈ ಮಹಾನ್ ಭೂಮಿಗೆ ಧನ್ಯವಾದ ಸಲ್ಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.