Recent Posts

Sunday, January 19, 2025
ಸುದ್ದಿ

ನೇತ್ರಾವತಿ ನದಿಯ ನೀರಿನಲ್ಲಿ ಮುಳುಗಿ ಇಬ್ಬರು ಸಾವು – ಕಹಳೆ ನ್ಯೂಸ್

ಬಂಟ್ವಾಳ: ನೇತ್ರಾವತಿ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬರೀಮಾರು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಮನೀಷ್ (14) ಮತ್ತು ಅಜೀತ (40) ಎಂದು ಗುರುತಿಸಲಾಗಿದ್ದು, ರಕ್ಷಿತ್ (13) ಎಂಬಾತನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ತಾಲೂಕು ಬರೀಮಾರು ಗ್ರಾಮದ ಕಾಗೆಕಾನ ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ನೀರಾಟವಾಡುತ್ತಿದ್ದಾಗ ಈ ಅವಘಡ ಸಂಭವಿದೆ ಎನ್ನಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಪೊಲೀಸರು ಇನ್ನಷ್ಟೇ ತಿಳಿಸಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು