ಬಂಟ್ವಾಳ: ಯೂತ್ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ಹಾಗೂ ದ.ಕ. ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಾಗೂ ಕೊಲೆ ಬೆದರಿಕೆವೊಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಹಿನ್ನಲೆ ಬಂಟ್ವಾಳದ ನಿವಾಸಿಗಳಾದ ಸಚಿನ್, ನಿಶಾಂತ್, ಕಾಸರಗೋಡು ನಿವಾಸಿ ಕಾರ್ತಿಕ್ ಎಂಬವರನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲುವು ಸಾಧಿಸಿರುವ ಹಿನ್ನೆಲೆ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್‍ನಲ್ಲಿ ಮೇ 23ರಂದು ರಾತ್ರಿ ಬಿಜೆಪಿ ಬಡಕಬೈಲ್ ಸಮಿತಿಯು ವಿಜಯೋತ್ಸವ ಹಮ್ಮಿಕೊಂಡಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಮಿಥುನ್ ರೈಗೆ ಅವಾಚ್ಯ ಶಬ್ಬಗಳಿಂದ ನಿಂದಿಸಿದ್ದಾರೆ. ಅಲ್ಲದೆ ಕೊಲೆ ಬೆದರಿಕೆಯನ್ನು ಕೂಡ ಹಾಕಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.