Sunday, November 24, 2024
ಸುದ್ದಿ

ಜೂ.7ರಿಂದ ಮೈಸೂರು – ಬೆಂಗಳೂರು ವಿಮಾನಯಾನ ಆರಂಭ – ಕಹಳೆ ನ್ಯೂಸ್

ಮೈಸೂರು : ಪ್ರತಿಷ್ಠಿತ ಉಡಾನ್-3 ಯೋಜನೆಯಡಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಕೊಚ್ಚಿಗೆ ಇನ್ನೇನು ಕೆಲವೇ ದಿನಗಳಲ್ಲಿ ವಿಮಾನಯಾನ ಸಂಪರ್ಕ ಆರಂಭವಾಗಲಿದೆ.

ಏರ್ ಇಂಡಿಯಾದ ಅಲಯನ್ಸ್ ಏರ್ ಸಂಸ್ಥೆಯು ಕಡಿಮೆ ದರದಲ್ಲಿ ಈ ಸೇವೆ ಒದಗಿಸಲು ಮುಂದಾಗಿದೆ. ಮಂಗಳವಾರ ಹೊರತುಪಡಿಸಿ ವಾರದಲ್ಲಿ 6 ದಿನ ಈ ವಿಮಾನ ಕಾರ್ಯಾಚರಣೆ ನಡೆಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

‘ಉಡಾನ್-3’ ಯೋಜನೆಯಡಿ ಮೈಸೂರಿನಿಂದ ಪ್ರಮುಖ ನಗರಗಳಿಗೆ ಅಗ್ಗದ ವಿಮಾನಯಾನ ಸೇವೆ ಕಲ್ಪಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಕೊಚ್ಚಿ, ಚೆನ್ನೈ ಅಲ್ಲದೇ ಬೆಳಗಾವಿ, ಹೈದರಾಬಾದ್ (ಎರಡು ವಿಮಾನ), ಗೋವಾ (ಪಣಜಿ), ಬೆಂಗಳೂರಿಗೆ ಸದ್ಯದಲ್ಲೇ ವಿಮಾನಯಾನ ಸೇವೆ ಕಲ್ಪಿಸಲಾಗುತ್ತದೆ.

ಸಮಯದ ಉಳಿತಾಯ ಹೇಗೆ..?
ಪ್ರತಿನಿತ್ಯ ಮಧ್ಯಾಹ್ನ 12ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೊರಡುವ ಏರ್ ಇಂಡಿಯಾ ವಿಮಾನ ಒಂದು ಗಂಟೆಯ ಅವಧಿಯಲ್ಲಿ, ಅಂದರೆ ಮಧ್ಯಾಹ್ನ 1ಕ್ಕೆ ಬೆಂಗಳೂರು ವಿಮಾನ ನಿಲ್ದಾಣ ತಲುಪುತ್ತದೆ. ಅದೇ ರೀತಿ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನಿಂದ ಹೊರಟು 11.25ಕ್ಕೆ ಅಂದರೆ ಕೇವಲ ಐವತ್ತೈದು ನಿಮಿಷಗಳಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದು ಸೇರಲಿದೆ. ಇದರ ದರ 1,589 ರೂಪಾಯಿ ನಿಗದಿಗೊಳಿಸಲಾಗಿದೆ. ಇದೇ ರೀತಿ ವಾರದ ಪ್ರತಿದಿನವೂ ಟಿಕೆಟ್ ಬೆಲೆಯಲ್ಲಿ ವ್ಯತ್ಯಾಸವಾಗಲಿದೆ.

ಇನ್ನೊಂದು ವಿಚಾರ ಅಂದರೆ ಪ್ರತಿ ಮಂಗಳವಾರ ಈ ವಿಮಾನ ಸೇವೆ ಕಾರ್ಯ ನಿರ್ವಹಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ ವಿಮಾನ ಯಾನ ಅಧಿಕಾರಿಗಳು.

ಇನ್ನು ಈ ವಿಚಾರವನ್ನು ಸಂಸದ ಪ್ರತಾಪ ಸಿಂಹ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಪ್ರಾದೇಶಿಕ ಸಂಪರ್ಕ ವ್ಯವಸ್ಥೆಯಡಿ ಈ ಸೇವೆ ಒದಗಿಸಲು ನಾಗರಿಕ ವಿಮಾನಯಾನ ಸಚಿವಾಲಯ ಜನವರಿಯಲ್ಲಿ ಅನುಮತಿ ನೀಡಿತ್ತು. ಇದರೊಂದಿಗೆ ಪ್ರವಾಸಿಗಳ ಸ್ವರ್ಗ ಕೇರಳ ರಾಜ್ಯದೊಂದಿಗೆ ಸಾಂಸ್ಕೃತಿಕ ನಗರಿ ಮೈಸೂರಿಗೆ ವಾಯುಯಾನ ಸಂಪರ್ಕ ಏರ್ಪಡಲಿದೆ.