Sunday, January 19, 2025
ಸುದ್ದಿ

ಅಕಸ್ಮಿಕವಾಗಿ ಬೆಂಕಿ ತಗುಲಿ ಗಾಯ : ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಮಹಿಳೆ – ಕಹಳೆ ನ್ಯೂಸ್

ಬಂಟ್ವಾಳ: ಅಕಸ್ಮಿಕವಾಗಿ ಬೆಂಕಿ ತಗುಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನರಿಕೊಂಬು ಗ್ರಾಮದ ಕಲ್ಲಗ ದರ್ಖಾಸು ನಿವಾಸಿ ದಿ.ವೆಂಕಪ್ಪ ಪೂಜಾರಿ ಅವರ ಪತ್ನಿ ಸುಂದರಿ (62) ಮೃತಪಟ್ಟವರು.
ಮೇ.24 ರಂದು ಅಪರಾಹ್ನ ಮೂರು ಗಂಟೆಯ ವೇಳೆ ಅವರ ಮನೆಯ ಹೊರಭಾಗದಲ್ಲಿರುವ ಅಡುಗೆ ಶೆಡ್ಡಿನಲ್ಲಿರುವ ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡಿಕೊಂಡಿರುವಾಗ ಒಲೆಯ ಬೆಂಕಿ ಆಕಸ್ಮಿಕವಾಗಿ ತಾಗುಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ಸೊಂಟದ ಭಾಗಕ್ಕೆ ಮತ್ತು ಕೈಗಳಿಗೆ ಬೆಂಕಿ ತಗುಲಿ ಗಂಭೀರ ಸ್ವರೂಪದ ಗಾಯಗಾಳಾಗಿತ್ತು.
ಇವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಗಂಭೀರವಾದ ಗಾಯವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸುಂದರಿ ಅವರು ಮೇ.29ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.