Recent Posts

Sunday, January 19, 2025
ರಾಜಕೀಯಸುದ್ದಿ

ಎರಡನೇ ಬಾರಿ ಪ್ರಧಾನಿ ಆದ ಬಳಿಕ ಮೋದಿ ಮೊದಲ ವಿದೇಶಿ ಪ್ರವಾಸ- ಕಹಳೆ ನ್ಯೂಸ್

ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಎರಡನೇ ಬಾರಿಗೆ ನಿನ್ನೆ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ 57ಮಂದಿ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಮಾಡಬೇಕಿದ್ದು, ಇದಾದ ಬಳಿಕ ಜೂನ್ 7 ರಿಂದ 9ರವರೆಗೆ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ ಮಾಲ್ಡಿವ್ಸ್ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರಧಾನಿಯಾದ ಬಳಿಕ ಇದು ಅವರ ಮೊದಲ ವಿದೇಶ ಪ್ರವಾಸವಾಗಿದೆ. ಮಾಲ್ಡಿವ್ಸ್ ಸಂಸತ್ ಸದಸ್ಯರನ್ನು ಉದ್ದೇಶಿಸಿ ನರೇಂದ್ರ ಮೋದಿಯವರು ಮಾತನಾಡಲಿದ್ದು, ಬಳಿಕ ಅಧ್ಯಕ್ಷರ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಕಳೆದ ಬಾರಿ ಪ್ರಧಾನಿಯಾಗಿದ್ದ ವೇಳೆ ನರೇಂದ್ರ ಮೋದಿಯವರು ಭೂತಾನ್‍ಗೆ ಮೊದಲ ಪ್ರವಾಸ ಕೈಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು