Saturday, November 23, 2024
ಸುದ್ದಿ

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ಗುಂಪು ಘರ್ಷಣೆ | ಹೊತ್ತಿ ಉರಿತು ಬೆಳಗಾವಿ

 

ಬೆಳಗಾವಿ: ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಒಬ್ಬರಿಗೊಬ್ಬರು ಕಲ್ಲು ತೂರಿ, ಬಡಿದಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಗುಂಪು ಘರ್ಷಣೆಯಿಂದ ಖಡಕಗಲ್ಲಿ, ಬಡಕಲಗಲ್ಲಿ, ಜಾಲಗಾರಗಲ್ಲಿಗಳಲ್ಲಿ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿಲಾಗಿದೆ. ಇನ್ನು ಘಟನೆಯಲ್ಲಿ ಒಂದು ಮನೆ, ನಾಲ್ಕು ಬೈಕ್, ಒಂದು ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ನಗರದ ಹೆಚ್ಚುವರಿ ಪೊಲೀಸ್ ಆಯುಕ್ತ ರಾಮಚಂದ್ರರಾವ್, ಡಿಸಿಪಿ ಸೀಮಾ ಲಾಟ್ಕರ್, ಅಮರನಾಥ ರೆಡ್ಡಿ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.  ಕಲ್ಲು ತೂರಾಟ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಮಾರ್ಕೆಟ್ ಇನ್ಸ್ ಪೆಕ್ಟರ್, ಎಸಿಪಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪೆಂಡಾಲ್ ನಿರ್ಮಾಣ ವಿಚಾರವಾಗಿ ದೇವಸ್ಥಾನಕ್ಕೆ ದುಷ್ಕರ್ಮಿಗಳು ಹಾನಿ ಮಾಡೋ ಯತ್ನ ನಡೆಸಿದ್ದಾರೆ. ಇನ್ನು ಈ ಗಲಭೆ ಕುರಿತಂತೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಲು ನಿರ್ಧರಿಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹೆಚ್ಚಿನ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಕಲ್ಲುತೂರಾಟ ನಡೆದ ಪ್ರದೇಶದಲ್ಲಿ ಡಿಸಿಪಿಗಳು ಮೊಕ್ಕಾಂ ಹೂಡಿದ್ದಾರೆ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ. ಸದ್ಯಕ್ಕೆ ಸ್ಥಿತಿ ಶಾಂತವಾಗಿದ್ದು, ಹತೋಟಿಯಲ್ಲಿದೆ ಎಂದು ರಾಮಚಂದ್ರರಾವ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response