Monday, January 20, 2025
ಸುದ್ದಿ

ಉಡುಪಿಯಲ್ಲಿ ಪೊಲೀಸ್ ನೇರ ಫೋನ್‍ ಇನ್ ಕಾರ್ಯಕ್ರಮ – ಕಹಳೆ ನ್ಯೂಸ್

ಉಡುಪಿ: ಲೋಕಸಭಾ ಚುನಾವಣಾ ಕಾರಣಗಳಿಂದಾಗಿ ವಿರಾಮ ಪಡೆದುಕೊಂಡಿದ್ದ ಪೊಲೀಸ್ ನೇರ ಫೋನ್ ಇನ್ ಕಾರ್ಯಕ್ರಮ ಇಂದು ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ನಡೆಯಿತು. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಕಾರ್ಯಕ್ರಮವನ್ನ ನಡೆಸಿದರು.

ಸಾರ್ವಜನಿಕರು ನೇರ ಫೋನ್ ಇನ್ ಕಾರ್ಯಕ್ರಮಕ್ಕೆ ಕರೆ ಮಾಡಿ ತಮ್ಮ ಅಹವಾಲುಗಳಣ್ನು ತಿಳಿಸಿದರು. ಜೊತೆಗೆ ಯಾವುದಾದರು ಪೊಲೀಸ್ ಇಲಾಖಾ ಕರ್ತವ್ಯಕ್ಕೆ ಸಂಬಂಧಪಟ್ಟಂತೆ ಸಲಹೆಗಳು ಹಾಗೂ ಪೊಲೀಸ್ ಇಲಾಖಾ ಕರ್ತವ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಒಟ್ಟಿನಲ್ಲಿ ಫೋನ್ ಇನ್ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬಂದಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು