Wednesday, January 22, 2025
ಸುದ್ದಿ

ಜಂಕ್ಷನ್‍ಗಳಲ್ಲಿ ಸಿಸಿಟಿವಿ ಸಹಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆ : ಉಡುಪಿ ಜಿಲ್ಲಾ ಎಸ್‍ಪಿ ನಿಶಾ ಜೇಮ್ಸ್ ಹೇಳಿಕೆ – ಕಹಳೆ ನ್ಯೂಸ್

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 (ಎ)ರಲ್ಲಿ ಬರುವ ಪ್ರಮುಖ 18 ಜಂಕ್ಷನ್‍ಗಳಲ್ಲಿ ಸಿಸಿಟಿವಿ ಸಹಿತ ಟ್ರಾಫಿಕ್ ಸಿಗ್ನಲ್ ಅಳವಡಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಉಡುಪಿ ಜಿಲ್ಲಾ ಎಸ್‍ಪಿ ನಿಶಾ ಜೇಮ್ಸ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಎಸ್‍ಪಿ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆ, ಕಟಪಾಡಿ ಹಾಗೂ ಅಂಬಲಪಾಡಿ ಜಂಕ್ಷನ್‍ಗಳಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುವಂತೆ ಹಿಂದಿನ ಎಸ್‍ಪಿ ಲಕ್ಷ್ಮಣ್ ನಿಂಬರಗಿ ಅವರ ಅವಧಿಯಲ್ಲಿ ಪ್ರಸ್ತಾವ ಕಳುಹಿಸಲಾಗಿತ್ತು. ಅದು ಈಗ ಅನುಷ್ಠಾನದ ಹಂತದಲ್ಲಿದೆ’ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆದ್ದಾರಿಯ ಪ್ರಮುಖ ಜಂಕ್ಷನ್‍ನಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಹೆಚ್ಚುವರಿಯಾಗಿ ಅಂಬಾಗಿಲು, ಪಡುಬಿದ್ರಿ, ಉದ್ಯಾವರದ ಬಲಾಯಿಪಾದೆ, ಕುಂದಾಪುರದ ಸಂಗಮ್, ಹೆಮ್ಮಾಡಿ ಹಾಗೂ ತಲ್ಲೂರಿನಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುವಂತೆ ಪ್ರಾಧಿಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ವಿವರ ನೀಡಿದರು.

ರಾಷ್ಟ್ರೀಯ ಹೆದ್ದಾರಿ 169 (ಎ)ರಲ್ಲಿ ನಗರ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಜಂಕ್ಷನ್‍ಗಳಾದ ಮಲ್ಪೆ, ಕರಾವಳಿ, ಬನ್ನಂಜೆ, ಶಿರಿಬೀಡು, ಕಲ್ಸಂಕ, ಎಂಜಿಎಂ, ಮಣಿಪಾಲದ ಸಿಂಡಿಕೇಟ್ ಸರ್ಕಲ್, ಟೈಗರ್ ಸರ್ಕಲ್ ಹಾಗೂ ಎಂಐಟಿ ಜಂಕ್ಷನ್‍ನಲ್ಲಿ ಸಿಸಿಟಿವಿ ಅಳವಡಿಸುವಂತೆ ಪ್ರಸ್ತಾನೆ ಕಳುಹಿಸಲಾಗಿದೆ ಎಂದರು.