ಎತ್ತಿನಹೊಳೆ ಯೋಜನೆಗೆ ಮತ್ತೊಂದು ವಿಘ್ನ; ಹಸಿರು ನ್ಯಾಯಪೀಠ ತೀರ್ಪು ವಿರೋಧಿಸಿ ಸುಪ್ರೀಂ ಮೆಟ್ಟಿಲೇರಲು ಪರಿಸರವಾದಿಗಳ ಸಿದ್ಧತೆ – ಕಹಳೆ ನ್ಯೂಸ್
ಹಾಸನ ; ಇಲ್ಲಿನ ನೇತ್ರಾವತಿ ನದಿ ತಿರುವು ಎತ್ತಿನಹೊಳೆ ಯೋಜನೆ ವಿರೋಧಿಸಿ ಪರಿಸರವಾದಿಗಳು ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ನ್ಯಾಯಪೀಠ ವಜಾ ಮಾಡಿದ್ದು, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಹೋರಾಟಗಾರರು ನಿರ್ಧರಿಸಿದ್ದಾರೆ.
ಎತ್ತಿನಹೊಳೆ ಯೋಜನೆಗೆ ಕನಿಷ್ಠ 60 ಕಿ. ಮೀ ವ್ಯಾಪ್ತಿಯಷ್ಟು ಅರಣ್ಯ ನಾಶ ಮಾಡಿ ಆ ಪ್ರದೇಶವನ್ನು ಸಮಗೊಳಿಸಿ ಭೂಮಿಯ ಒಳಭಾಗದಲ್ಲಿ ಕೊಳವೆಗಳನ್ನು ಹೂಳಲಾಗುವುದು. ಇದರಿಂದ 400 ಎಕರೆಗೂ ಮೀರಿದ ಅರಣ್ಯ ನಾಶವಾಗುವ ಸಾಧ್ಯತೆ ಇದೆ. ಪಶ್ಚಿಮ ಘಟ್ಟ ನಾಶವಾಗಿದ್ದು ಈಗಾಗಲೇ 20 ಸಾವಿರ ಮರಗಳನ್ನು ಕಡಿಯಲಾಗಿದೆ. ಅಪಾರ ಪ್ರಮಾಣದ ವನ್ಯಜೀವಿಗಳ ಮಾರಣ ಹೋಮವಾಗಿದೆ ಎಂಬುದು ಪರಿಸರವಾದಿಗಳ ಆರೋಪ.
ಈ ಯೋಜನೆಯನ್ನು ವಿರೋಧಿಸಲು ಕಾರಣ?
ಈ ಕಾರ್ಯಕ್ಕೆ ಬೃಹದಾಕಾರದ ಪೈಪ್ ಅಳವಡಿಸಲು ಹಾಗೂ ವಿದ್ಯುತ್ ಸರಬರಾಜಿಗೆ ಅರಣ್ಯದೊಳಗೆ 120 ಅಡಿ ಅಗಲದ ಜಾಗವನ್ನು ತೆರವುಗೊಳಿಸಲಾಗುವುದು. ಇದಕ್ಕೆ ಕನಿಷ್ಠ 60 ಕಿ. ಮೀ ವ್ಯಾಪ್ತಿಯಷ್ಟು ಅರಣ್ಯ ನಾಶ ಮಾಡಿ ಆ ಪ್ರದೇಶವನ್ನು ಸಮಗೊಳಿಸಿ ಭೂಮಿಯ ಒಳಭಾಗದಲ್ಲಿ ಕೊಳವೆಗಳನ್ನು ಹೂಳಲಾಗುವುದು. ಇದರಿಂದ 400 ಎಕರೆಗೂ ಮೀರಿದ ಅರಣ್ಯ ನಾಶವಾಗುವ ಸಾಧ್ಯತೆ ಇದೆ. ಪಶ್ಚಿಮ ಘಟ್ಟ ನಾಶವಾಗಿದ್ದು ಈಗಾಗಲೇ 20 ಸಾವಿರ ಮರಗಳನ್ನು ಕಡಿಯಲಾಗಿದೆ. ಅಪಾರ ಪ್ರಮಾಣದ ವನ್ಯಜೀವಿಗಳ ಮಾರಣ ಹೋಗವಾಗಿದೆ. ಅಲ್ಲದೆ ಕುಡಿಯುವ ನೀರಿನ ಯೋಜನೆ ಎಂಬ ಹೆಸರಿನಲ್ಲಿ ಕೇಂದ್ರ ಸರ್ಕಾರದ ಅರಣ್ಯ ಮತ್ತು ಪರಿಸರ ಇಲಾಖೆಯ ಕಾನೂನುಗಳನ್ನು ರಾಜ್ಯ ಸರ್ಕಾರ ಸ್ಪಷ್ಟವಾಗಿ ಉಲ್ಲಂಘಿಸಿದೆ ಎಂಬುದು ಪರಿಸರವಾದಿಗಳ ಆರೋಪ.