ಬಂಟ್ವಾಳ: ಬಸ್ ಪಲ್ಟಿಯಾಗಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಿಂದ ಪಾರಾದ ಘಟನೆ ಬಂಟ್ವಾಳ ಸಮೀಪದ ಸೋರ್ನಾಡು ಎಂಬಲ್ಲಿ ನಡೆದಿದೆ. ಬಿಸಿರೋಡಿನಿಂದ ಮೂಡಬಿದ್ರೆ ಕಡೆಗೆ ಹೋಗುತ್ತಿದ್ದ ವೆಲಂಕಣಿ ಬಸ್ ಸೋರ್ನಾಡು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‍ನಲ್ಲಿದ್ದ ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಮಂಜುನಾಥ್, ಸಿಬ್ಬಂದಿ ಗಳಾದ ಲತೀಪ್, ವಸಂತ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.