Tuesday, January 21, 2025
ಸುದ್ದಿ

ಶಾಸಕ ಕಾಮತ್ ಸೂಚನೆಯಂತೆ 2 ದಿನಗಳಲ್ಲಿ ಸ್ಮಶಾನಗುಡ್ಡೆಯಲ್ಲಿ ಕೊಳವೆಬಾವಿ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ನಗರ ದಕ್ಷಿಣದಲ್ಲಿ ಇರುವ ಜೆಪ್ಪಿನಮೊಗರು ಪ್ರದೇಶದ ಸ್ಮಶಾನಗುಡ್ಡೆ ಪರಿಸರದಲ್ಲಿ ವಾಸಿಸುವ ನಾಗರಿಕರು ಅನೇಕ ವರ್ಷದಿಂದ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದರು. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಪ್ರದೇಶವಾಗಿದ್ದರೂ ಗುಡ್ಡ ಪ್ರದೇಶವಾಗಿರುವುದರಿಂದ ತುಂಬೆಯಿಂದ ಪೈಪಿನ ಮೂಲಕ ಬರುವ ನೀರು ಈ ಭಾಗದಲ್ಲಿ ಎತ್ತರದ ಪ್ರದೇಶದ ಕಾರಣದಿಂದ ತಲುಪುತ್ತಿರಲಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಭಾಗದ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನ ಕಾಣದೇ ಅಲ್ಲಿನ ನಾಗರಿಕರು ಶಾಸಕ ಡಿ ವೇದವ್ಯಾಸ ಕಾಮತ್ ಅವರನ್ನು ಭೇಟಿಯಾಗಿ ಕೊಳವೆಬಾವಿ ತೋಡಿ ಕುಡಿಯುವ ನೀರಿನ ಸಂಕಷ್ಟವನ್ನು ಬಗೆಹರಿಸಲು ಕೋರಿದರು. ತಕ್ಷಣ ಅಧಿಕಾರಿಗಳನ್ನು ಸಂಪರ್ಕಿಸಿ ಶಾಸಕ ಕಾಮತ್ ಜಪ್ಪಿನಮೊಗರು ಸ್ಮಶಾನಗುಡ್ಡೆ ಯಲ್ಲಿ ಶೀಘ್ರದಲ್ಲಿ ಕೊಳವೆಬಾವಿ ತೋಡುವಂತೆ ಸೂಚನೆ ನೀಡಿದರು. ಶಾಸಕ ಕಾಮತ್ ಸೂಚನೆಯಂತೆ ಎರಡು ದಿನಗಳೊಳಗೆ ಅಲ್ಲಿ ಕೊಳವೆಬಾವಿ ತೋಡಲಾಗಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ. ಶಾಸಕ ವೇದವ್ಯಾಸ ಕಾಮತ್ ಅವರ ಶೀಘ್ರ ಕ್ರಮ ನಾಗರಿಕರ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು