ಮೂಡಬಿದಿರೆಯ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಉಮನಾಥ್ ಕೋಟ್ಯಾನ್ ಉದ್ಘಾಟಿಸಿದರು, ಬಳಿಕ ಮಾತನಾಡಿದ ಅವರು ಕ್ಷೇತ್ರದ ಜನರ ಸೇವೆಗಾಗಿ ಸದಾ ಸಿದ್ಧ ಎಂದು ಹೇಳಿದರು.
ಮೂಡಬಿದಿರೆ ಅತೀ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದು, ಆದರೆ ಈ ಹಿಂದಿನ ಜನಪ್ರತಿನಿಧಿಗಳು ಬಸ್ ನಿಲ್ದಾಣದಲ್ಲಿ ಒಂದು ಕುಡಿಯುವ ನೀರಿನ ವ್ಯವಸ್ಥೆ ಮಾಡುವಲ್ಲಿ ಕೂಡ ವಿಫಲರಾಗಿದ್ದರು. ಆದರೆ ಇದೀಗ ಶಾಸಕರಾದ ಉಮನಾಥ್ ಕೋಟ್ಯಾನ್ ಎಲ್ಲವನ್ನೂ ಸರಿಪಡಿಸುತ್ತಾ ಸಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.