Recent Posts

Sunday, January 19, 2025
ಸುದ್ದಿ

ಟಿಪ್ಪುವನ್ನು ಪೂಜಿಸೋರು ಅಧಿಕಾರಕ್ಕೆ ಬರಬಾರದು – ಯೋಗಿ

 

ಹುಬ್ಬಳ್ಳಿ: ಕರ್ನಾಟಕದಲ್ಲಿ ಅರಾಜಕತೆ ಮೂಡಲು ಕಾಂಗ್ರೆಸ್ ಆಡಳಿತ ಕಾರಣ. ರಾಹುಲ್ ಗಾಂಧಿಯನ್ನು ದೇಶಕ್ಕೆ ರಾಜನನ್ನಾಗಿ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ನವರು ಹನುಮನನ್ನು ಪೂಜಿಸಲ್ಲ, ಟಿಪ್ಪುವನ್ನು ಪೂಜಿಸುತ್ತಾರೆ. ಹೀಗಾಗಿ ಟಿಪ್ಪುವನ್ನು ಪೂಜಿಸುವವರು ಅಧಿಕಾರಕ್ಕೆ ಬರಬಾರದು ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದ ಪರಿವರ್ತನಾ ಯಾತ್ರೆಯ ರಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕದಲ್ಲಿ ಕಾಂಗ್ರೆಸ್ ನಿಂದಾಗಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಷಯ ನೋವನ್ನುಂಟು ಮಾಡುತ್ತಿದೆ. ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 10 ಸಾವಿರ ಕೋಟಿ ಅನುದಾನ ನೀಡಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನು ಬಯಸುತ್ತಿಲ್ಲ ಎಂದು ಕಿಡಿಕಾರಿದರು.

ಕನ್ನಡದಲ್ಲಿ ಭಾಷಣ ಆರಂಭಿಸಿದ್ದ ಯೋಗಿ:

ಉತ್ತರ ಕರ್ನಾಟಕದ ಜನತೆಗೆ ನನ್ನ ಧನ್ಯವಾದಗಳು ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಕರ್ನಾಟಕದ ಭೂಮಿ ಭಜರಂಗಬಲಿ,ಹನುಮನ ಭೂಮಿ. ಕರ್ನಾಟಕ ಶೌರ್ಯದ ನೆಲ. ಯಡಿಯೂರಪ್ಪ ನೇತೃತ್ವದಲ್ಲಿ ಯಾತ್ರೆ ಯಶಸ್ವಿಯಾಗಿ ನಡೆಯುತ್ತಿದೆ. ಅದಕ್ಕಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಟಿಪ್ಪುವನ್ನು ಪೂಜಿಸುವವರು ಅಧಿಕಾರಕ್ಕೆ ಬರಬಾರದು. ಗೋ ಮಾಂಸ ತಿನ್ನುವವರ ಪರ ವಕಾಲತ್ತು ವಹಿಸುವವರನ್ನು ಜನರು ಆರಿಸಬಾರದು. ಎಂದು ಯೋಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Leave a Response